ಅಪರೂಪದ ಸಂಗಮ
ಬಳ್ಳಾರಿ: ಒಂದೇ ತರಗತಿಯಲ್ಲಿ ಓದಿದ ವಿದ್ಯಾರ್ಥಿಗಳು ಒಂದೆಡೆ ಸೇರುವುದು ಅಪರೂಪ. 50 ವರ್ಷಗಳ ಅವಧಿಯಲ್ಲಿ ಒಂದೇ ಕಾಲೇಜಿನಲ್ಲಿ ವಿವಿಧ ಶೈಕ್ಷಣಿಕ ವರ್ಷದಲ್ಲಿ ಓದಿರುವ ವಿದ್ಯಾರ್ಥಿಗಳನ್ನು ಒಂದೆಡೆ ನೋಡುವುದೂ, ಸೇರಿಸುವುದನ್ನು ಊಹಿಸಿಕೊಳ್ಳುವುದು ಕಷ್ಟ. ಆದರೆ ಬಳ್ಳಾರಿಯ ಕೊಟ್ಟೂರುಸ್ವಾಮಿ ಬಿಇಡಿ ಕಾಲೇಜಿನಲ್ಲಿ ಮಾತ್ರ ಅವರೆಲ್ಲ ಸೇರಿದ್ದರು. ಹೌದು, ಈ ಕಾಲೇಜು ತನ್ನ ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಇಂತಹ ಅವಕಾಶವನ್ನು ಮಾಡಿಕೊಟ್ಟಿತ್ತು. ಅದೊಂದು ಹೃದಯ ಸ್ಪರ್ಶಿ ಕಾರ್ಯಕ್ರಮವಾಗಿತ್ತು. ಶೈಕ್ಷಣಿಕವಾಗಿ ಉನ್ನತ ಸ್ಥಾನಕ್ಕೇರಿದ ವ್ಯಕ್ತಿ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಯಾಗಿ ಪಾಲ್ಗೊಂಡಿದ್ದು, ಅವರು ವಿದ್ಯಾರ್ಥಿ ದಿಸೆಯಲ್ಲಿನ ನೆನಪುಗಳನ್ನು ಮೆಲುಕು ಹಾಕುವಂತೆ ಮಾಡಿತ್ತು. ಶಿಕ್ಷಕರಾಗಿ ಪಾಠ ಹೇಳಿ, ನಿವೃತ್ತಿಯಾಗಿರುವ ವ್ಯಕ್ತಿ ಸಮಾರಂಭದಲ್ಲಿ ತನ್ನ ಸ್ನೇಹಿತರೊಂದಿಗೆ ಭಾವನೆಗಳನ್ನು ಹಂಚಿಕೊಂಡು ಸಂತೋಷದ ಕಡಲಲ್ಲಿ ತೇಲಿದ್ದರು. ಅವರ ಕೈಯಲ್ಲಿ ಓದಿ ಬೆಳೆದ ಹಲವು ಸಾಧನೆ ಮಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಕರಾಗಿದ್ದ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು ಒಂದೇ ಕಡೆ ನೋಡಿದ ಕಾಲೇಜಿನ ಹಾಲಿ, ನಿವೃತ್ತ ಪ್ರಾಚಾರ್ಯರು, ಪ್ರಾಧ್ಯಾಪಕರ ಸಂತೋಷಕ್ಕೆ ಪಾರವೆ ಇಲ್ಲದಂತಾಗಿತ್ತು.
ಮಕ್ಕಳು, ಮೊಮ್ಮಕ್ಕಳೊಂದಿಗೆ: 1963ರಿಂದ ಇಲ್ಲಿಯವರೆಗೆ ಕಲಿತು ಪಾಸಾಗಿರುವ ವಿದ್ಯಾರ್ಥಿಗಳು ತಮ್ಮ ಮಕ್ಕಳು, ಮೊಮ್ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಸ್ಪರ ವೃತ್ತಿ ಜೀವನ, ನೈಜ ಜೀವನದ ಸುಖ ಸಂತೋಷವನ್ನು ಹಂಚಿಕೊಂಡರು. ವಯಸ್ಸು 50, 60ರ ಗಡಿ ದಾಟಿದರೂ ಅಲ್ಲಿ ಮಾತ್ರ ವಿದ್ಯಾರ್ಥಿಯ ಮನೋಭಾವನೆ ತೋರಿದ್ದು ವಿಶೇಷವಾಗಿತ್ತು. ಕೆಲ ಶಿಕ್ಷಕರು ವೃತ್ತಿ ಜೀವನ ಪೂರೈಸಿ ನಿವೃತ್ತಿ ಜೀವನ ಮಾಡುತ್ತಿದ್ದರೂ ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಪಾಲ್ಗೊಂಡು, ಕಾಲೇಜಿನ ಶಿಕ್ಷಕರಿಗೆ, ತಮ್ಮ ಹಳೆ ಗುರುಗಳ ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದು ಇನ್ನು ವಿಶೇಷ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

