ಸೇವೆಗಾಗಿ ಗೃಹರಕ್ಷಕರು ಸದಾ ಸನ್ನದ್ಧರಾಗಿರಿ: ಡಿ. ವಿಶ್ವೇಶ್ವರ ಭಟ್
ಬಳ್ಳಾರಿ: ಗೃಹರಕ್ಷಕರು ವಿಪತ್ತು ಪರಿಸ್ಥಿತಿಗಳಲ್ಲಿ ಸೇವೆ ನೀಡಲು ಸದಾ ಸನ್ನದ್ಧರಾಗಿರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ. ವಿಶ್ವೇಶ್ವರ ಭಟ್ ಕರೆ ನೀಡಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕಂದಾಯ ಇಲಾಖೆ, ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾ ಗೃಹರಕ್ಷಕದಳ ಸಹಯೋಗದಲ್ಲಿ, ನಗರದ ಜಿಲ್ಲಾ ಗೃಹರಕ್ಷಕ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎರಡು ದಿನಗಳ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಪತ್ತುಗಳ ಕುರಿತು ಮಾಹಿತಿ ನೀಡಿದರು. ಈ ಹಿಂದೆ ಸಂಭವಿಸಿದ ಸುನಾಮಿ, ಭೋಪಾಲ ಅನಿಲ ದುರಂತ ಬಹುಮಹಡಿ ಕಟ್ಟಡಗಳ ದುರಂತದಲ್ಲಿ ಗೃಹ ರಕ್ಷಕರ ಸೇವೆ ಶ್ಲಾಘನೀಯವಾದುದಾಗಿದೆ. ಈ ಕಾರ್ಯಾಗಾರದಲ್ಲಿ ತರಬೇತಿ ಹೊಂದಿದವರು ಸ್ವಯಂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ವಿಮ್ಸ್ ನಿರ್ದೇಶಕ ಡಾ. ಲಕ್ಷ್ಮೀನಾರಾಯಣರೆಡ್ಡಿ ಮಾತನಾಡಿ, ವಿಪತ್ತುಗಳ ನಿರ್ವಹಣೆ ಮಾಡುವ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಪಾಧ್ಯಕ್ಷ ಡಾ. ಟೇಕೂರು ರಾಮನಾಥ್, ಕಾರ್ಯದರ್ಶಿ ಡಾ. ಎಚ್. ನಿಜಾಮುದ್ದೀನ್, ಬಿ. ದೇವಣ್ಣ, ಡಾ. ಮಹಿಪಾಲ್, ಗೃಹರಕ್ಷಕದಳದ ಉಪ ಸಮಾದೇಷ್ಟ ಎಸ್.ಎ. ವಾಹಿದ್, ಹಲವಾರು ಸಂಸ್ಥೆಗಳ ಸ್ವಯಂ ಸೇವಕರು ಹಾಗೂ ಗೃಹರಕ್ಷಕರು ಭಾಗವಹಿಸಿದ್ದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷ ಎಂ.ಎ. ಷಕೀಬ್ ಸ್ವಾಗತಿಸಿದರು. ಸಹ ಬೋಧಕ ಎಚ್. ತಿಪ್ಪೇಸ್ವಾಮಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

