ಹಗರಿಬೊಮ್ಮನಹಳ್ಳಿ ಗ್ರಾಪಂಗೆ ಕನಕಪ್ಪ ಅವಿರೋಧ ಆಯ್ಕೆ
ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್ನಿಂದ ಹಳೆ ಹಗರಿಬೊಮ್ಮನಹಳ್ಳಿ ಗೊಲ್ಲರ ಓಣಿಯ ವ್ಯಾಸನಕೇರಿ ಕನಕಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕನಕಪ್ಪ ಹೊರತುಪಡಿಸಿ ನಾಮಪತ್ರ ಸಲ್ಲಿಸಿದ್ದ ಉಳಿದ ಐವರು ನಾಮಪತ್ರ ವಾಪಾಸ್ ಪಡೆದು ಕನಕಪ್ಪ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದರು. ಈ ಹಿಂದೆ ಈ ವಾರ್ಡ್ನಿಂದ ಆಯ್ಕೆಗೊಂಡಿದ್ದ ಹಾಲ್ದಾಳ ವಿಜಯಕುಮಾರ ಅವರ ರಾಜಿನಾಮೆಯಿಂದಾಗಿ ಈ ಸ್ಥಾನ ತೆರವುಗೊಂಡಿತ್ತು. ಹೀಗಾಗಿ ಜಿಲ್ಲಾಡಳಿತ ಮಾರ್ಚ್ 2ರಂದು ಈ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಿತ್ತು. ಆಯ್ಕೆ ಬಯಸಿ ಕನಕಪ್ಪ ಸೇರಿ 6 ಜನ ನಾಮಪತ್ರ ಸಲ್ಲಿಸಿದ್ದರು.
ಗ್ರಾಮದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಂದೆಡೆ ಸೇರಿ ಒಮ್ಮತದ ಆಯ್ಕೆಗೆ ಒಲವು ವ್ಯಕ್ತಪಡಿಸಿದ ಮೇಲೆ ಕನಕಪ್ಪ ಹೊರತುಪಡಿಸಿದಂತೆ ಉಳಿದವರು ತಮ್ಮ ನಾಮಪತ್ರ ಹಿಂಪಡೆದರು. ಗ್ರಾಪಂ ಮಾಜಿ ಅಧ್ಯಕ್ಷ ಎಚ್.ಎಂ. ಚೋಳರಾಜ, ಹುಡೇದ್ ಗುರುಬಸವರಾಜ, ಗ್ರಾಪಂ ಮಾಜಿ ಉಪಾಧ್ಯಕ್ಷ ಸೋಮನಗೌಡ ಪಾಟೀಲ್, ಸದಸ್ಯ ತ್ಯಾವಣಿಗಿ ಕೊಟ್ರೇಶ, ನಾರಾಯಣಪ್ಪ, ವಿ. ಹನುಮಂತಪ್ಪ, ಮುಖಂಡ ಉತ್ತಂಗಿ ವೀರಣ್ಣ, ಚಿತ್ತವಾಡಿಗಿ ಪ್ರಕಾಶ, ತಳವಾರ ರಾಘವೇಂದ್ರ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

