ಬಳ್ಳಾರಿ

ಮಾದಕ ವಸ್ತುಗಳಿಂದ ದುಷ್ಪರಿಣಾಮ

Published On :

ಬಳ್ಳಾರಿ: ಮದ್ಯಪಾನ ಮತ್ತು ಮಾದಕ ವಸ್ತುಗಳು ಕೇವಲ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂದು ಜಿಪಂ ಪ್ರಭಾರಿ ಸಿಇಒ ಬಿ.ಟಿ. ನಂದೀಶ್ ತಿಳಿಸಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಇಲಾಖೆ, ಶ್ರೀಮತಿ ಗಾಲಿ ರುಕ್ಷ್ಮಿಣಮ್ಮ ಚಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿಯಾಗಿ ಏರ್ಪಡಿಸಿದ್ದ ಮದ್ಯಪಾನ - ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ನಿಯಂತ್ರಣ ಕುರಿತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಮದ್ಯಪಾನ, ಮಾದಕ ವಸ್ತುಗಳು ಪರಿಸರವನ್ನು ಹದಗೆಡಿಸುತ್ತದೆ. ಅದರಲ್ಲೂ ಯುವಕ, ಯುವತಿಯರು ಎಚ್ಚರದಿಂದ ಇರಬೇಕು. ಉನ್ನತ ಶಿಕ್ಷಣ ಮಾಡುವವರು ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು.
ಯಾವುದೇ ಮಾದಕ ವಸ್ತುಗಳಿಗೆ ಬಲಿಯಾಗದೇ ಉತ್ತಮ ಶಿಕ್ಷಣವನ್ನು ಪಡೆದು ಸ್ವಾವಲಂಬಿಗಳಾಗಬೇಕು. ಕುಟುಂಬಕ್ಕೆ ಕೀರ್ತಿ ತರುವಂತಾಗಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಕರು, ಪೋಷಕರು ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸಬೇಕು. ಮದ್ಯಪಾನ ಮತ್ತು ಮಾದಕ ವಸ್ತುಗಳಿಂದ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿದ್ದು, ಇವುಗಳಿಗೆ ಯಾರೂ ಬಲಿಯಾಗದೇ ನಿಯಂತ್ರಣಕ್ಕೆ ಸಾರ್ವಜನಿಕರೆಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.
ನಗರ ಪೊಲೀಸ್ ಉಪ ಅಧೀಕ್ಷಕ ಮುರುಗಣ್ಣನವರ್ ಮಾತನಾಡಿ,  ಮದ್ಯಪಾನ ಮತ್ತು ಮಾದಕ ವಸ್ತುಗಳ ನಿರ್ಮೂಲನೆಗೆ ಪೊಲೀಸ್ ಇಲಾಖೆ ಸದಾ ಶ್ರಮಿಸುತ್ತಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು ಸಹಕರಿಸಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಮನೋವೈದ್ಯ, ವಿಮ್ಸ್ ಸಹಾಯಕ ಪ್ರಾಧ್ಯಾಪಕ ಡಾ. ವಿಜಯರಾಜ್ ಎನ್ ಜಗ್ಲಿ, ಎಸ್.ವಿ. ಕುಲಕರ್ಣಿ, ಪ್ರಾಂಶುಪಾಲ ಬಿ. ಪ್ರಕಾಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಾರ್ತಾಧಿಕಾರಿ ಎಚ್. ಶ್ರೀನಿವಾಸ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಮುತ್ತೇಗೌಡ ನಿರೂಪಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಸೋಮಶೇಖರ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಕೌಲ್ ಬಜಾರ್‌ನ ರೇಡಿಯೋ ಪಾರ್ಕ್ ಬಳಿ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಚಾಲನೆ ನೀಡಿದರು. ಗಣೇಶ ಗುಡಿ ರಸ್ತೆ, ಕೌಲ್ ಬಜಾರ್ ಮಾರ್ಗವಾಗಿ ಜಾಥಾ ಸಂಚರಿಸಿ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.