ಬಳ್ಳಾರಿಯಲ್ಲಿ ಇಂದು ಪ್ರಶಸ್ತಿ ಪ್ರದಾನ, ಸಂಸ್ಕೃತಿ ಸಂಭ್ರಮ
ಬಳ್ಳಾರಿ: ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆಯಿಂದ ಮಾ. 1ರಂದು ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಹಾಗೂ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಾಡೋಜ ವಿ.ಟಿ. ಕಾಳೆ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಬಯಲಾಟ ಮತ್ತು ಯಕ್ಷಗಾನ ಅಕಾಡೆಮಿ ನೂತನ ಅಧ್ಯಕ್ಷ ಡಾ. ಬೆಳಗಲ್ಲು ವೀರಣ್ಣ ಪ್ರಶಸ್ತಿ ಪ್ರದಾನ ಮಾಡುವರು. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ. ಸುಭಾಷ್ ಭರಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ನಾಡೋಜ ದರೋಜಿ ಈರಮ್ಮ, ನಾಡೋಜ ಸುಭದ್ರಮ್ಮ ಮನ್ಸೂರು, ನಾಡೋಜ ಕಪ್ಪಗಲ್ ಪದ್ಮಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಡಾ. ವೆಂಕಟಯ್ಯ ಅಪ್ಪಗೆರೆ, ಎಂ. ಎರುಕುಲಸ್ವಾಮಿ, ಡಿ. ಸೂರಿ, ಜಿ. ಮುತ್ತುಕುಮಾರ್ ಪಾಲ್ಗೊಳ್ಳಲಿದ್ದಾರೆ. ಚಿಗುರು ಕಲಾತಂಡ ಹಾಗೂ ಲಕ್ಷ್ಮೀ ಕಲಾ ಕ್ಷೇತ್ರದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಪ್ರಶಸ್ತಿ ವಿಜೇತರು: ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆಯಿಂದ ಕೊಡ ಮಾಡುವ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪ್ರತಿವರ್ಷದಂತೆ ಈ ಬಾರಿಯೂ ಅರ್ಹ ಪ್ರತಿಭಾನ್ವಿತ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ಹತ್ತು ವರ್ಷಗಳಿಂದ ಪ್ರತಿಭಾನ್ವಿತ ವ್ಯಕ್ತಿಗಳನ್ನು ಗುರುತಿಸಿ ಡಾ.ಎಚ್.ಎನ್., ಡಾ. ಅಂಬೇಡ್ಕರ್, ಭರಣಿಶ್ರೀ, ವೈದ್ಯ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿದೆ. ಅದೇ ರೀತಿ ಈ ಬಾರಿಯೂ ವಿವಿಧ ಪ್ರಶಸ್ತಿಗಳಿಗೆ ಡಾ.ಸಿ. ವೀರಣ್ಣ, ಹಿರಿಯ ಪತ್ರಕರ್ತ ಡಾ. ಸರಜೂ ಕಾಟ್ಕರ್, ಬಿ.ಎಂ. ಬಷೀರ್, ಅನಿಲ್ ಹೊಸಮನಿ, ಪರಶುರಾಮ್ ಕಲಾಲ್, ಯುವ ಪತ್ರಕರ್ತರಾದ ಸಿದ್ದಯ್ಯ ಹಿರೇಮಠ್, ಶಶಿಧರ ಮೇಟಿ, ಕೆ.ಎಂ. ಮಂಜುನಾಥ್, ಧಾರವಾಡ ಕರ್ನಾಟಕ ವಿವಿಯ ಕುಲಸಚಿವ (ಮೌಲ್ಯಮಾಪನ) ಡಾ.ಎಚ್.ಟಿ. ಪೋತೆ, ಪ್ರಾಧ್ಯಾಪಕ ಡಾ. ಅರವಿಂದ ಮೂಲಿಮನಿ, ಹಂಪಿ ವಿವಿ ಸಹ ಪ್ರಾಧ್ಯಾಪಕ ಡಾ. ಚೆಲುವರಾಜು, ಪಿ. ಸತ್ಯನಾರಾಯಣರಾವ್, ಬಾಲ ಪ್ರತಿಭೆ ಸೌಮ್ಯ ಹಿರೇಮಠ್ ಸೇರಿದಂತೆ ಒಟ್ಟು 30 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಸಿ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

