ಏಡ್ಸ್ ಬಗ್ಗೆ ಅರಿತಾಗ ರೋಗ ನಿರ್ಮೂಲನೆ
ಹೊಸಪೇಟೆ: ಪ್ರತಿಯೊಬ್ಬರೂ ಏಡ್ಸ್ ರೋಗದ ಬಗ್ಗೆ ಸಂಪೂರ್ಣ ತಿಳಿದುಕೊಂಡಾಗ ಮಾತ್ರ ರೋಗವನ್ನು ಸಂಪೂರ್ಣ ನಾಶಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗ್ರತರಾಗಬೇಕು ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಜಿಲ್ಲಾ ಸಂಯೋಜಕ ಗಿರೀಶ್ ಹೇಳಿದರು.
ತಾಲೂಕಿನ ಮರಿಯಮ್ಮನಹಳ್ಳಿಯ ಪ್ರಿಯದರ್ಶಿನಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಹಾಗೂ ರೆಡ್ ರಿಬ್ಬನ್ ಕ್ಲಬ್ನಿಂದ ಹಮ್ಮಿಕೊಂಡಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಏಡ್ಸ್ ಬಗ್ಗೆ ಜನರಲ್ಲಿ ಅರಿವು ಹೆಚ್ಚಾಗುತ್ತಿದ್ದು, ಏಡ್ಸ್ನ ಹೊಸ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಏಡ್ಸ್ ಸಾಮಾಜಿಕ ಕಳಂಕವಲ್ಲ, ಏಡ್ಸ್ ಪೀಡಿತರೂ ಸಮಾನವಾಗಿ ಸಮಾಜದಲ್ಲಿ ಬದುಕಬೇಕಾಗಿದೆ. ಯುವಕರಲ್ಲಿ ಏಡ್ಸ್ ಬಗ್ಗೆ ಹೆಚ್ಚಿನ ತಿಳಿವಳಿಕೆ ಅಗತ್ಯವಾಗಿದೆ. ಯುವಜನತೆ ಎಚ್ಚರವಾದಲ್ಲಿ ನಮ್ಮ ದೇಶ ಏಡ್ಸ್ಮುಕ್ತ ದೇಶವನ್ನಾಗಿಸಲು ಸಾಧ್ಯ ಎಂದು ಅವರು ಹೇಳಿದರು.
ಸರ್ಡೋ ಸಂಸ್ಥೆಯ ರಾಘವೇಂದ್ರ, ಕಾಲೇಜಿನ ಪ್ರಾಚಾರ್ಯ ಎಂ. ಅಶೋಕ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪಿ. ರಾಮಚಂದ್ರ, ಸಹ ಕಾರ್ಯಕ್ರಮಾಧಿಕಾರಿ ಬಿ. ಕವಿತಾ, ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭ ಏಡ್ಸ್ ತಡೆಗಟ್ಟುವಲ್ಲಿ ಯುವಜನರ ಪಾತ್ರ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಕೆ. ಮಂಜುಳಾ (ಪ್ರಥಮ), ಎ. ಸುಮಾ (ದ್ವಿತೀಯ), ಕೆ. ಶ್ರೀಲಕ್ಷ್ಮಿ (ತೃತೀಯ) ಅವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ನಂತರ ಏಡ್ಸ್ ಜಾಗೃತಿ ಕುರಿತ ಭಿತ್ತಿ ಚಿತ್ರಗಳ ಪ್ರದರ್ಶನ ಜರುಗಿತು. ಕಾಲೇಜು ಮತ್ತು ಪ್ರೌಢಶಾಲೆ ವಿದ್ಯಾರ್ಥಿನಿಯರು ಭಿತ್ತಿ ಚಿತ್ರಗಳ ಪ್ರದರ್ಶನ ವೀಕ್ಷಿಸಿದರು. ಕಾರ್ಯಕ್ರಮಕ್ಕೂ ಮುನ್ನ ಮರಿಯಮ್ಮನಹಳ್ಳಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಕಾಲೇಜು ವಿದ್ಯಾರ್ಥಿನಿಯರು, ಗ್ರಾಮದ ಸಾರ್ವಜನಿಕರಿಗೆ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು.
--
ಏಡ್ಸ್ ಕುರಿತು ಜಾಗೃತಿ
ಬಳ್ಳಾರಿ: ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಸ್ಥಳೀಯ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಏಡ್ಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯ ಪಿ. ಬಸವನಗೌಡ ಉದ್ಘಾಟಿಸಿ ಮಾತನಾಡಿದರು. ರೆಡ್ ರಿಬ್ಬನ್ ಕ್ಲಬ್ನ ಜಿಲ್ಲಾ ಮೇಲ್ವಿಚಾರಕ ಗಿರೀಶ್, ಆಪ್ತ ಸಮಾಲೋಚಕ ಸುರೇಶ್ ಏಡ್ಸ್ ಹರಡುವಿಕೆ, ಅದರ ನಿಯಂತ್ರಣಕ್ಕೆ ವಹಿಸಬೇಕಾದ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ವರ್ಧೆ, ಭಿತ್ತಿಚಿತ್ರ ಬಿಡಿಸುವ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭ ಎಸ್.ಜಿ. ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೆ.ಎನ್. ಬಸವಲಿಂಗಪ್ಪ, ಸ್ವಾಗತಿಸಿದರು. ಟಿ. ರುದ್ರಗೌಡ ನಿರೂಪಿಸಿದರು. ಸೋಮಶೇಖರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

