ಬಳ್ಳಾರಿ

ದೇಶ ಅಭಿವೃದ್ಧಿ ಮಾಡಿ

Published On :

ಹೂವಿನಹಡಗಲಿ: ವಿದ್ಯಾರ್ಥಿ ದೆಸೆಯಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ದೇಶವನ್ನು ಅಭಿವೃದ್ಧಿಯತ್ತ ಯುವಜನತೆ ಮುನ್ನಡೆಸಬೇಕಿದೆ ಎಂದು ಜಿಪಂ ಸದಸ್ಯ ಜಿ. ವಸಂತ ಕರೆ ನೀಡಿದರು.
ತಾಲೂಕಿನ ದತ್ತುಗ್ರಾಮ ಗುಜನೂರಿನಲ್ಲಿ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸ.ಪ.ಪೂ ಕಾಲೇಜು ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಸೇವಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಜಿಬಿಆರ್ ಕಾಲೇಜಿನ ಉಪನ್ಯಾಸಕ ಎಚ್.ಎಂ. ಗುರುಬಸವರಾಜಯ್ಯ ಮಾತನಾಡಿ, ಶಿಬಿರಗಳ ಯಶಸ್ಸಿಗೆ ಗ್ರಾಮದವರ ಸಂಪೂರ್ಣ ಸಹಕಾರ ಅಗತ್ಯವಾಗಿದ್ದು, ವಿದ್ಯಾರ್ಥಿಗಳಲ್ಲಿರುವ ಸೂಕ್ತ ಪ್ರತಿಭೆ ಹೊರ ಹಾಕಲು ಸೂಕ್ತ ವೇದಿಕೆಯೇ ಎನ್‌ಎಸ್‌ಎಸ್ ಎಂದು ತಿಳಿಸಿದರು.
ತಾಪಂ ಸದಸ್ಯೆ ಮಂಗಳಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಸುಂಕ್ಯಾನಾಯ್ಕ, ಸದಸ್ಯರಾದ ಹೊಸಮನಿ ನೀಲಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಕರ್ಕಿಹಳ್ಳಿ ರಮೇಶ್, ಶಿಕ್ಷಕ ಕೆ.ಎಸ್.ಎಂ. ಸಂಗಮನಾಥ, ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಅಕ್ಬರ್ ಉಪಸ್ಥಿತರಿದ್ದರು.
ಪ್ರೊ. ಎಲ್.ಪಿ. ನಾಗೇಶ್ ಪ್ರತಿಜ್ಞಾವಿಧಿ ಬೋಧಿಸಿದರು. ಶಿಬಿರಾಧಿಕಾರಿ ಪ್ರೊ. ಎ. ಕೊಟ್ರಗೌಡ ಪ್ರಾಸ್ತಾವಿಕ ಮಾತನಾಡಿದರು.
ಶಿಬಿರಾರ್ಥಿ ಯು. ಎಲ್ಲಮ್ಮ, ಸಂಗಡಿಗರು ಪ್ರಾರ್ಥಿಸಿದರು. ಪ್ರಾಚಾರ್ಯ ಕೋರಿ ಹಾಲೇಶ್ ಸ್ವಾಗತಿಸಿದರು. ಉಪನ್ಯಾಸಕ ಬಸೆಟ್ಟಿ ಪ್ರಕಾಶ್ ನಿರೂಪಿಸಿದರು. ಉಪನ್ಯಾಸಕಿ ಮೆಹತಾಜ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.