ಬಳ್ಳಾರಿ

5ರಂದು ಸಂಕೀರ್ತನ

Published On :

ಬಳ್ಳಾರಿ: ಬಳ್ಳಾರಿ ಕಲ್ಚರಲ್ ಅಸೋಸಿಯೇಷನ್ ಜ. 5ರಂದು ಸಂಜೆ 6.30ಕ್ಕೆ ನಗರದ ರಾಘವಕಲಾ ಮಂದಿರದಲ್ಲಿ ಶ್ರೀ ಅನ್ನಮಯ್ಯ ಸಂಕೀರ್ತನ ಕಾರ್ಯಕ್ರಮ ಏರ್ಪಡಿಸಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ಪೊಂಪಾಪತಿ ಕಾರ್ಯಕ್ರಮ ಉದ್ಘಾಟಿಸುವರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದ ಸಂಚಲನಾಧಿಕಾರಿ ವಿ. ಅಂಜಿನಪ್ಪ ಅಧ್ಯಕ್ಷತೆ ವಹಿಸುವರು. ತಿರುಪತಿಯ ಡಾ. ಕೋರಾಡ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಗೀತಪ್ರಿಯರು, ಭಕ್ತಾದಿಗಳು, ಕಲಾಭಿಮಾನಿಗಳು ಆಗಮಿಸಿ ಯಶಸ್ವಿಗೊಳಿಸುವಂತೆ ಅಸೋಸಿಯೇಷನ್ ಅಧ್ಯಕ್ಷ ಶೀಲಾ ಬ್ರಹ್ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
8ರಿಂದ ಅಯ್ಯಪ್ಪಸ್ವಾಮಿ ಪೂಜೆ
ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ಜ. 8, 9ರಂದು ಎರಡು ದಿನ ಅಯ್ಯಪ್ಪ ಮಾಲಾಧಾರಿಗಳ ಇರುಮುಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಯ್ಯಪ್ಪ ಮಾಲಾಧಾರಿಗಳು ತಿಳಿಸಿದ್ದಾರೆ. ಬೆಳಗ್ಗೆಯಿಂದಲೇ ಗುರುಸ್ವಾಮಿಗಳ ಸಾನ್ನಿಧ್ಯದಲ್ಲಿ ಇರುಮುಡಿ ಕಟ್ಟುವ ಕಾರ್ಯ ಆರಂಭವಾಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಇರುಮುಡಿ ಪ್ರಯುಕ್ತ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ನೇರವೇರುತ್ತದೆ.
ಅನಾರೋಗ್ಯ: ಕೈದಿ ಸಾವು
ಬಳ್ಳಾರಿ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಅನಾರೋಗ್ಯ ನಿಮಿತ್ತ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಜಿಲ್ಲೆಯ ಬೈಲೂರು ಗ್ರಾಮದ ಜಂಬುನಾಥ್(32), ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2012ರಲ್ಲಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ. ಅನಾರೋಗ್ಯ ನಿಮಿತ್ತ ಡಿ. 28ರಂದು ವಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ಮೃತ ಪಟ್ಟಿದ್ದಾನೆ. ಈ ಕುರಿತು ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.