ಬಳ್ಳಾರಿ

ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಿ

Published On :

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಜ. 2
ಕೃಷಿಯೊಂದಿಗೆ ಹೈನುಗಾರಿಕೆ, ತೋಟಗಾರಿಕೆಯಲ್ಲಿ ಹೊಸ ತಂತ್ರಜ್ಞಾನವನ್ನು ರೈತರು ಮತ್ತು ಮಹಿಳೆಯರು ಅಳವಡಿಸಿಕೊಂಡು ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವನಾಯ್ಕ ಹೇಳಿದರು.
ತಾಲೂಕಿನ ನಾಗತಿ ಬಸಾಪುರದಲ್ಲಿ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ (ಗುಲ್ಬರ್ಗ), ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಯೋಗದಲ್ಲಿ ಮೆಕ್ಕೆಜೋಳ ಉತ್ಪಾದನೆಯ ತಾಂತ್ರಿಕತೆಗಳು ಹಾಗೂ ಆದಾಯ ವೃದ್ಧಿಸುವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ತಾಲೂಕಿನ ಗ್ರಾಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ರಚಿಸಿರುವ ಸ್ವ-ಸಹಾಯ ಸಂಘಗಳು ಸ್ವಯಂ ಉದ್ಯೋಗದಿಂದ ಆರ್ಥಿಕಾಭಿವೃದ್ಧಿಗಾಗಿ ಕೃಷಿ ವಿಜ್ಞಾನಿಗಳಿಂದ ಮಾಹಿತಿ ಪಡೆದು, ಆದಾಯ ವೃದ್ಧಿಸುವ ತರಬೇತಿಗಳನ್ನು ಕೃಷಿ, ತೋಟಗಾರಿಕೆ, ಪಶು ಇಲಾಖೆಗಳ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ ಎಂದರು.
ರೈತರು ಬೆಳೆದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಿದೆ. ರೈತರಿಗೆ ಗುಣಮಟ್ಟದ ಬೀಜ, ಕೃಷಿ ಪರಿಕರಗಳ ವಿತರಣೆಯಲ್ಲಿ ಇಲಾಖೆಗಳು ರೈತರಿಗೆ ನಷ್ಟವಾಗದಂತೆ ಎಚ್ಚರಿಕೆ ವಹಿಸಬೇಕೆಂದ ಅವರು, ಇದಕ್ಕಾಗಿ ಸೂಕ್ತ ಕಾನೂನು ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ ಎಂದರು.
ಹಿರಿಯ ತೋಟಗಾರಿಕೆ ನಿರ್ದೇಶಕ ಡಾ. ಡಿ.ಬಿ.ಯೋಗಾನಂದ ಮಾತನಾಡುತ್ತಾ, ರೈತರು ಕೃಷಿಯಲ್ಲಿ ತೋಟಗಾರಿಕೆ ಬೆಳೆಗೆ ಸರ್ಕಾರದ ರಿಯಾಯ್ತಿ ದರದ ಹನಿ ನೀರಾವರಿ, ತುಂತುರು ಹನಿ ನೀರಾವರಿ ಅಳವಡಿಸಿಕೊಂಡು ಹಣ್ಣಿನ ಗಿಡಗಳನ್ನು ಬೆಳೆಯಲು ರೈತರು ಮುಂದಾಗಬೇಕೆಂದು ಕರೆ ನೀಡಿದರು.
ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಸಿ.ಎಂ.ಕಾಲಿಬಾವಿ ಮಾತನಾಡುತ್ತಾ, ರೈತರಿಗೆ ಹಾಗೂ ಸ್ವ-ಸಹಾಯ ರೈತ ಮಹಿಳೆಯರಿಗೆ ಮೆಕ್ಕೆಜೋಳ ಕೊಯ್ಲೇತರ ತಾಂತ್ರಿಕತೆ ಮಾಹಿತಿ ನೀಡುತ್ತಾ, ರೈತ ಮಹಿಳೆಯರು ಸ್ವಯಂ ವೃದ್ಧಿ ಹೊಂದಲು ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆಯಿಂದ ವಿವಿಧ ಪದಾರ್ಥಗಳನ್ನು ತಯಾರಿಸಿ ಮಾರುಕಟ್ಟೆಗೆ ಸೂಕ್ತ ವ್ಯವಸ್ಥೆ ಕಂಡುಕೊಳ್ಳುವಲ್ಲಿ ಶ್ರಮಿಸಬೇಕೆಂದರು.
ಸಂಸ್ಥೆಯ ಯೋಜನಾಧಿಕಾರಿ ದಯಾನಂದ, ಕೀಟ ತಜ್ಞ ಹನುಮಂತಪ್ಪ ಶ್ರೀಹರಿ, ಸಸ್ಯರೋಗ ತಜ್ಞ ರಾಘವೇಂದ್ರ ಬಿ.ಟಿ. ತೋಟಗಾರಿಕೆ ತಜ್ಞ ಲಗಮಣ್ಣಾ ಆರ್.ಕಳ್ಳೂರ, ಕೃಷಿ ಮಾರುಕಟ್ಟೆ ಕಾರ್ಯದರ್ಶಿ ಎಂ.ಎಸ್. ಪಾಟೀಲ ಮಾತನಾಡಿದರು.
ತಾಪಂ ಸದಸ್ಯೆ ಪ್ರೇಮಾ ಅಧ್ಯಕ್ಷತೆವಹಿಸಿದ್ದರು. ಜಿಪಂ ಸದಸ್ಯ ವಸಂತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಗೋಳ್ ಚಿದಾನಂದ, ಎಂ. ಪರಮೇಶ್ವರಪ್ಪ, ಎ. ಕೊಟ್ರೇಶ, ಅರವಳ್ಳಿ ವೀರಣ್ಣ, ಎಪಿಎಂಸಿ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್ ಹಾಗೂ ನೂರಾರು ರೈತರು ಮತ್ತು ರೈತ ಮಹಿಳೆಯರು ಭಾಗವಹಿಸಿದ್ದರು. ಸುಭಾಷ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.