ಬಳ್ಳಾರಿ

ನೈತಿಕ ಪ್ರಜ್ಞೆ ಕೊರತೆಯಿಂದ ಅಪರಾಧ

Published On :

ಕನ್ನಡಪ್ರಭ ವಾರ್ತೆ, ಕೂಡ್ಲಿಗಿ, ಜ. 3
ಕೊಲೆ, ದರೋಡೆ, ಅತ್ಯಾಚಾರದಂಥ ಅನೇಕ ಅಪರಾಧಗಳು ನೈತಿಕತೆ ಪ್ರಜ್ಞೆಯಿಲ್ಲದೆ ನಡೆಯುತ್ತವೆ. ಅವುಗಳನ್ನು ತಡೆಯಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಡಿವೈಎಸ್ಪಿ ಪಿ.ಡಿ. ಗಜಕೋಶ ತಿಳಿಸಿದರು.
ಅವರು ತಾಲೂಕಿನ ಗುಡೇಕೋಟೆ ಸರ್ಕಾರಿ ಪಪೂ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಪರಾಧ ಮನೋಭಾವನೆ ಹೋಗಲಾಡಬೇಕಿದೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಕೊಲೆ, ಸುಲಿಗೆಯಂಥ ಅಪರಾಧಗಳಿಗೆ ಕಡಿವಾಣ ಹಾಕುವ ನೈತಿಕತೆ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಗ್ರಾಮಗಳಲ್ಲಿ ಸಂಚರಿಸುವ ಅಪರಿಚಿತರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಕೂಡಲೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿದರೆ ಅಪರಾಧ ನಿಯಂತ್ರಿಸಲು ಸಹಾಯವಾಗುತ್ತದೆ. ಇತ್ತೀಚೆಗೆ ತಂತ್ರಜ್ಞಾನ ಹೆಚ್ಚಿನ ಬಳಕೆಯಿಂದ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಕಾನೂನಿನ ಬಿಗಿ ನಿಲುವಿನಿಂದ ಅಪರಾಧ ಎಸಗುವವರು ಕಠಿಣಶಿಕ್ಷೆಗೆ ಗುರಿಯಾಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ವಿದ್ಯಾರ್ಥಿ ಯುವ ಸಮೂಹ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಸಂಭವಿಸುವ ಅಪರಾಧ ಕೃತ್ಯಗಳನ್ನು ತಡೆಯಲು ಅರಿವು ಮೂಡಿಸುವ ಅನಿವಾರ್ಯತೆಯಿದೆ ಎಂದು ತಿಳಿಸಿದರು.
ಗುಡೇಕೋಟೆ ಸಬ್‌ಇನ್‌ಸ್ಪೆಕ್ಟರ್ ಎಸ್.ಬಿ. ನವೀನ್‌ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಸಾಗಾಣಿಕೆ, ಕಳ್ಳತನ, ವೇಶ್ಯವಾಟಿಕೆ, ಜೂಜು ಇನ್ನಿತರ ಅಪರಾಧಿ ಚಟುವಟಿಕೆಗಳನ್ನು ತಡೆಯಲು ಪ್ರತಿಯೊಬ್ಬರೂ ಎಚ್ಚರವಹಿಸುವ ಅಗತ್ಯವಿದೆ. ಅಪರಾಧಗಳನ್ನು ನಿಯಂತ್ರಿಸಿ ಜನತೆ ನಿರ್ಭೀತಿಯಿಂದ ಜೀವಿಸಲು ಹೆಚ್ಚಿನ ಕ್ರಮ ಕೈಗೊಳ್ಳಲು ಇಲಾಖೆ ಸಹಕಾರಿಯಾಗಿದೆ ಎಂದು ತಿಳಿಸಿದರು. ಇಲ್ಲಿನ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಅಪರಾಧ ಕೃತ್ಯಗಳನ್ನು ತಡೆಯಲು ತಕ್ಷಣವೇ ದೂರವಾಣಿ ಕರೆ ಮಾಡಿ ಸಹಕರಿಸುವಂತೆ ವಿನಂತಿಸಿದರು.
ಉಪನ್ಯಾಸಕ ಎಚ್. ಈಶಪ್ಪ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಬುಡೇನ್‌ಸಾಬ್, ನಿಜಲಿಂಗನಗೌಡ, ನಾಗರಾಜ, ಇರ್ಫಾನ್‌ಬಾನು, ರಾಘವೇಂದ್ರ, ಮುಖ್ಯಶಿಕ್ಷಕ ಶ್ರೀನಿವಾಸ್, ಪೊಲೀಸ್ ಸಿಬ್ಬಂದಿ ಇದ್ದರು. ಬಿ.ವಿ. ರಂಗಸ್ವಾಮಿ ಸ್ವಾಗತಿಸಿದರು, ಸಿ. ರವಿಕುಮಾರ ಕಾರ್ಯಕ್ರಮ ನಿರ್ವಹಿಸಿದರು. ಸುಧಾರಾಣಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.