ಇಂದು ವಿದ್ಯುತ್ ವ್ಯತ್ಯಯ
ಮುನಿರಾಬಾದ್: ಇಲ್ಲಿನ ಸಮೀಪದ ಗಿಣಿಗೇರಾ ಗ್ರಾಮದ 110 ಕೆ.ವಿ. ಸಬ್ ಸ್ಟೇಷನ್ನಲ್ಲಿ ಭಾನುವಾರ ವಾರ್ಷಿಕ ನಿರ್ವಾಹಣ ಕಾರ್ಯಕೈಗೊಳ್ಳುತ್ತಿದ್ದು, ಗಿಣಿಗೇರಾ, ಕುಣಿಕೇರಿ, ಕಲ್ಲತಾವರಗೇರಾ ಹಾಗೂ ಬಗನಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿ ಅಡಿಯಲ್ಲಿ ಬರುವ ಗ್ರಾಮಗಳಲ್ಲಿ ಜ. 5ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಶಾಖಾಧಿಕಾರಿ ಮನವಿ ಮಾಡಿದ್ದಾರೆ.
ದಾಖಲಾತಿ ವೇಳಾಪಟ್ಟಿ ಪ್ರಕಟ
ಬಳ್ಳಾರಿ: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅಧಿನಿಯಮ- 2009ರನ್ವಯ ಮಕ್ಕಳನ್ನು ಶಾಲೆಗೆ ದಾಖಲಿಸುವ ಪ್ರಕ್ರಿಯೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಬಳ್ಳಾರಿ ಪೂರ್ವ ವಲಯ ಬಿಇಒ ವೃಷಭೇಂದ್ರಯ್ಯ ತಿಳಿಸಿದ್ದಾರೆ. ವೇಳಾಪಟ್ಟಿಯನ್ವಯ ಬಿಇಒ ಕಚೇರಿ ವ್ಯಾಪ್ತಿಗೆ ಬರುವ ಪ್ರತಿ ಶಾಲೆಯಲ್ಲಿ ಲಭ್ಯವಿರುವ ಶೇ. 25ರಷ್ಟು ಸ್ಥಾನಗಳ ಪಟ್ಟಿಯನ್ನು ಜ. 6ರಂದು ಕಚೇರಿಯಲ್ಲಿ ಪ್ರಕಟಿಸಲಾಗುವುದು. ಜ. 7 ಹಾಗೂ 8ರಂದು ಪೋಷಕರು ತಮ್ಮ ಮಕ್ಕಳ ಶಾಲಾ ದಾಖಲಾತಿ ಕೋರಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸ್ವೀಕರಿಸಿದ ಶಾಲೆಗಳು ನಿಯಮಾನುಸಾರ ಪರಿಶೀಲನೆ ನಡೆಸಿ ಆಯ್ಕೆ ಪಟ್ಟಿಯನ್ನು ಫೆ. 17ರೊಳಗಾಗಿ ಬಿಇಒಗೆ ಸಲ್ಲಿಸಬೇಕು. ಅನುಮೋದಿತ ಪಟ್ಟಿಯನ್ನು ಫೆ. 28ರೊಳಗಾಗಿ ಸಂಬಂಧಿಸಿದ ಶಾಲೆಗಳಿಗೆ ಕಳುಹಿಸಲಾಗುವುದು. ಮಾರ್ಚ್ 3ರಿಂದ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಕಾಯ್ದೆಯನ್ವಯ 2014-15ನೇ ಸಾಲಿಗಾಗಿ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನ ರಹಿತ (ಅಲ್ಪಸಂಖ್ಯಾತ ಶಾಲೆಗಳನ್ನು ಹೊರತುಪಡಿಸಿ) ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳು ದಾಖಲಾತಿ ಪಡೆಯಬಹುದು. ಪೂರ್ವ ಪ್ರಾಥಮಿಕ ಅಥವಾ 1ನೇ ತರಗತಿಗೆ ಶೇ. 25 ಮಕ್ಕಳನ್ನು ದಾಖಲು ಮಾಡಲು ಇಚ್ಛಿಸುವವರು ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಶಾಲೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವಿಳಾಸ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ಬಿಇಒ ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಮೋರ್ಚಾಕ್ಕೆ ನೇಮಕ
ಬಳ್ಳಾರಿ: ಭಾರತೀಯ ಜನತಾ ಪಕ್ಷದ ಬಳ್ಳಾರಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷರಾಗಿ ಬಿ.ಪಿ. ಜಾನಕಿರಾಮ ಅವರು ನೇಮಕವಾಗಿದ್ದಾರೆ. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ದತ್ತಾತ್ರೇಯ ರೆಡ್ಡಿ ಜಾನಕೀರಾಮ ಅವರ ನೇಮಕದ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

