ಬಳ್ಳಾರಿ

28 ಕ್ಷೇತ್ರಗಳಲ್ಲೂ ಬಿಎಸ್ಪಿ ಸ್ಪರ್ಧೆ: ಮಾರಸಂದ್ರ ಮುನಿಯಪ್ಪ

Published On :

ಬಳ್ಳಾರಿ: ಬಹುಜನ ಸಮಾಜ ಪಾರ್ಟಿಯು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಬಿಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ತಿಳಿಸಿದ್ದರು. ಆದರೆ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಆದೇಶದಂತೆ ಯಾವುದೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಸ್ಪರ್ಧಿಸಲಾಗುವುದು. ಅಭ್ಯರ್ಥಿಗಳನ್ನು ರಾಜ್ಯ ಸಮಿತಿ ಆಯ್ಕೆ ಮಾಡಿದ್ದು, ಜ. 15ರಂದು ಲಕ್ನೋದಲ್ಲಿ ಮಾಯಾವತಿ ನೇತೃತ್ವದಲ್ಲಿ ಪರಿಚಯಿಸಲಾಗುವುದು ಎಂದರು.
ಲಕ್ನೋ ಚಲೋ: ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರ 58ನೇ ಜನ್ಮದಿನದ ನಿಮಿತ್ತ ಜ. 15ರಂದು ಲಕ್ನೋದಲ್ಲಿ ರಾಷ್ಟ್ರೀಯ ಜಾಗೃತ ವಿಶಾಲ ಮಹಾರ್ಯಾಲಿ ಜರುಗಲಿದ್ದು, ಇದರಲ್ಲಿ 25ರಿಂದ 30 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಿಂದ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿ ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ರೈತರ ಭೂಮಿ ಹಕ್ಕಿಗಾಗಿ ಒತ್ತಾಯಿಸಿ ಮತ್ತು ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜ. 30ರಂದು ಪಕ್ಷ ಎಲ್ಲ ತಾಲೂಕು ಕಚೇರಿಗಳ ಮುಂದೆ ಧರಣಿ ಹಮ್ಮಿಕೊಳ್ಳಲಿದೆ ಎಂದು ಹೇಳಿದರು. ಉತ್ತರಪ್ರದೇಶ ಎಂಎಲ್ಸಿ ಡಾ. ಅಶೋಕ್ ಸಿದ್ಧಾರ್ಥ, ಆರ್. ಮುನಿಯಪ್ಪ, ಬಿ. ಕಮಲನಾಭನ್, ರವಿಕಾಂತ್, ಗಣೇಶ್, ಉಮಾಪತಿ, ಅಬ್ದುಲ್ ಅತೀಫ್, ಮಲ್ಲಪ್ಪ ಹೆಗಡೆ, ರೇಣುಕುಮಾರ್, ಮಹದೇವ, ಲಕ್ಷ್ಮಣ್, ಚಿದಾನಂದ, ಹುಲಿಗೆಪ್ಪ, ಎಚ್.ಎಂ. ಕುಮಾರ್, ರಜಿನಿ ಮಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.