ಉದ್ಯೋಗದ ವಾತಾವರಣ ಸೃಷ್ಟಿಸಿ: ಟೇಕೂರ್
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 4
ಬ್ರಾಹ್ಮಣ ಸಮುದಾಯದ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಿ, ಸಮುದಾಯದ ಯುವಕರಿಗೆ ಉದ್ಯೋಗ ದೊರೆಯುವಂಥ ವಾತಾವರಣ ಸೃಷ್ಟಿಸಬೇಕು ಎಂದು ಡಾ. ಟೇಕೂರ್ ರಾಮನಾಥ್ ಕರೆ ನೀಡಿದರು.
ಸ್ಥಳೀಯ ಬ್ರಾಹ್ಮಣ ಸಂಘರ್ಷ ಸಮಿತಿಯು ಭಾನುವಾರ ಸಮಿತಿ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವೈದ್ಯರು, ವಕೀಲರು, ಉದ್ಯಮಿಗಳು, ಸರ್ಕಾರಿ ನೌಕರರು, ಸರ್ಕಾರೇತರ ನೌಕರರು, ನರ್ಸ್ಗಳು ಹಾಗೂ ಪುರೋಹಿತರು ಒಂದೇ ವೇದಿಕೆಯಲ್ಲಿ ಸೇರಿ ಯುವಪೀಳಿಗೆಯ ಭವಿಷ್ಯದ ಚಿಂತಿಸುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಎಲ್ಲರ ಶ್ರಮ ಅಗತ್ಯ ಎಂದು ತಿಳಿಸಿದರು.
ಬ್ರಾಹ್ಮಣ ಸಂಘರ್ಷ ಸಮಿತಿ ಜಿಲ್ಲಾ ಗೌರವಾಧ್ಯಕ್ಷ ಬಿ.ಕೆ. ಶ್ರೀನಿವಾಸಮೂರ್ತಿ ಮಾತನಾಡಿ, ಎಲ್ಲ ಬ್ರಾಹ್ಮಣ ವೈದ್ಯರು, ಶುಷ್ರೂಶಕರು ಕೂಡಲೇ ಸಂಘರ್ಷ ಸಮಿತಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.
ಇದೇ ಸಂದರ್ಭ ಸಮಿತಿಯಲ್ಲಿ ಹೆಸರು ನೋಂದಾಯಿಸಿದ ಸದಸ್ಯರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಡಾ. ರಾಧಾಕೃಷ್ಣ, ಪ್ರಾಚಾರ್ಯ ಹರಿಕುಮಾರ್, ವೇಣುಗೋಪಾಲ್, ಮಹಿಳಾ ಭಜನಾ ಮಂಡಳಿ ಸದಸ್ಯರು ಖ್ಯಾತ ವೈದ್ಯರು, ವಕೀಲರು, ಯುವಕರು, ಉದ್ಯಮಿಗಳು, ನೌಕರರು ಇತರರು ಇದ್ದರು. ಸಮಿತಿ ಕಾರ್ಯದರ್ಶಿ ಕೆ.ಎಸ್. ಗುರುರಾಜ್ ನಿರೂಪಿಸಿದರು. ವೇಣುಗೋಪಾಲ್ ವಂದಿಸಿದರು.
ಮೌನಾಚರಣೆ: ಈಚೆಗೆ ನಿಧನರಾದ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಮತ್ತು ಮುಖ್ಯಗುರು ಹೇಮಾದ್ರಿ ಭಟ್ರ ನಿಧನಕ್ಕೆ ಎರಡು ನಿಮಿಷಗಳ ಮೌನಾಚರಣೆ ಮಾಡಿ, ಸಂತಾಪ ಸೂಚಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

