ಬಳ್ಳಾರಿ

ಸಾವಯವ ಕೃಷಿಗೆ ಆದ್ಯತೆ ನೀಡಿ: ಶ್ರೀನಿವಾಸ್

Published On :

ಹೊಸಪೇಟೆ: ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಆಹಾರ ಧಾನ್ಯಗಳನ್ನು ಬೆಳೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಬಿಜೆಪಿ ರೈತ ಮೋರ್ಚ್ ಜಿಲ್ಲಾಧ್ಯಕ್ಷ ಎಚ್. ಶ್ರೀನಿವಾಸ್ ವ್ಯಾಸನಕೆರೆ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗೆ ಉತ್ತಮ ಬೆಂಬಲ ಬೆಲೆ ನೀಡಬೇಕು. ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾದರೆ ಎಲ್ಲ ರೀತಿಯ ಸೌಲಭ್ಯಗಳು ರೈತರಿಗೆ ದೊರೆಯಲಿವೆ. ಮೋದಿ ಅವರನ್ನು ಪ್ರಧಾನಿ ಮಾಡಲು ರೈತ ಮೋರ್ಚಾ ಸೇರಿದಂತೆ ಬಿಜೆಪಿಯ ಎಲ್ಲ ಘಟಕಗಳ ಕಾರ್ಯಕರ್ತರು ಮತ್ತು ಮುಖಂಡರು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಗಿರಿಗೌಡ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಧಾನಿಯನ್ನಾಗಿ ಮಾಡಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ಜಿಲ್ಲಾ ಎಸ್ಟಿ ಮೋರ್ಚಾದ ಅಧ್ಯಕ್ಷ ಮೈಲಾರಲಿಂಗ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭ, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಪಂತರ್ ಜಯಂತ್, ಜಿಲ್ಲಾ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಚಂದ್ರಶೇಖರ್, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಟಿ. ಮಲ್ಲಿಕಾರ್ಜುನ, ನಗರ ಘಟಕಾಧ್ಯಕ್ಷ ಗುಜ್ಜಲ್ ಹನುಮೇಶ್, ನಗರಸಭಾ ಸದಸ್ಯ ಚಂದ್ರಕಾಂತ್ ಕಾಮತ್, ರೂಪೇಶ್‌ಕುಮಾರ್, ತಾಲೂಕು ಅಧ್ಯಕ್ಷ ವಿನಾಯಕಸ್ವಾಮಿ, ಶಣ್ಮುಖಪ್ಪ, ರೇವಣಸಿದ್ದಪ್ಪ, ಎ. ಗೋವಿಂದರಾಜ, ಎ.ಕೆ. ವಿಜಯೀಂದ್ರ, ರತ್ನ, ಎಸ್. ರಾಜಶೇಖರ್ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ರೈತ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಶಂಕರಬಂಡಿ ಸ್ವಾಗತಿಸಿದರು. ಎಚ್. ಈಶ್ವರ್ ವಂದಿಸಿದರು. ಎ. ಗೋವಿಂದರಾಜ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.