ಬಸ್ ವ್ಯವಸ್ಥೆ ಕಲ್ಪಿಸಲು ಮನವಿ
ಹೊಸಪೇಟೆ: ತಾಲೂಕಿನ ವಡ್ಡರಹಳ್ಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಎಸ್ಎಫ್ಐ ತಾಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗೆ ಮನವಿಪತ್ರ ಸಲ್ಲಿಸಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಎಸ್ಎಫ್ಐ ತಾಲೂಕು ಸಮಿತಿಯ ಕಾರ್ಯದರ್ಶಿ ವಸಂತ ಕಲಾಲ್ ಮಾತನಾಡಿ, ಹೊಸಪೇಟೆ ನಗರಕ್ಕೆ ಗ್ರಾಮಾಂತರ ಪ್ರದೇಶವಾದ ವಡ್ಡರಹಳ್ಳಿಯಿಂದ ಶಾಲಾ-ಕಾಲೇಜಿಗೆ ಬರಲು ಸಕಾಲಕ್ಕೆ ಬಸ್ಗಳ ವ್ಯವಸ್ಥೆ ಇಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಬಸ್ಪಾಸ್ ಹೊಂದಿದ್ದಾರೆ ಎಂಬ ಕಾರಣಕ್ಕೆ ಬಸ್ಗಳನ್ನು ವಿದ್ಯಾರ್ಥಿಗಳ ಶಾಲಾ-ಕಾಲೇಜುಗಳಿಗೆ ಹೋಗುವ ಸಮಯಕ್ಕೆ ಸಂಚಾರ ಮಾಡದೆ, ವಿದ್ಯಾರ್ಥಿಗಳೆಲ್ಲರೂ ಶಾಲಾ-ಕಾಲೇಜುಗಳಿಗೆ ಹೋದ ನಂತರ ಬಸ್ಗಳನ್ನು ಗ್ರಾಮಾಂತರ ಪ್ರದೇಶಕ್ಕೆ ಕಳುಹಿಸುತ್ತಿರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗುತ್ತಿದ್ದಾರೆ. ತಕ್ಷಣವೇ ಬಸ್ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಟಿ. ಶರತಕುಮಾರ್, ತಾಲೂಕು ಅಧ್ಯಕ್ಷ ಪಂಪಾನಂದ, ಎಂ.ಪಿ. ಪ್ರತಾ, ಕೆ. ರಮೇಶ್ ಇತರರು ಪ್ರತಿಭಟನೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

