ಈಶಾನ್ಯ ಸಾರಿಗೆ ಚಾಲನಾ ಸಿಬ್ಬಂದಿ ವರ್ಗಾವಣೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 6
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಬಿಜಾಪುರ ವಿಭಾಗವು ದೊಡ್ಡದಾಗಿದ್ದು, ಸುಮಾರು 200 ಚಾಲನಾ ಸಿಬ್ಬಂದಿ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳಿಗೆ ಸಂಸ್ಥೆಯ ಇತರೆ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚಾಲನಾ ಸಿಬ್ಬಂದಿಯನ್ನು ವಿಜಾಪುರ ವಿಭಾಗಕ್ಕೆ ವರ್ಗಾವಣೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿ ತಿಳಿಸಿದ್ದಾರೆ.
ಆಡಳಿತಾತ್ಮಕ ಕಾರಣಗಳಿಂದ ಇಲ್ಲಿವರೆಗೆ ವಿಜಾಪುರ ವಿಭಾಗಕ್ಕೆ ಯಾವುದೇ ಚಾಲನಾ ಸಿಬ್ಬಂದಿ ವರ್ಗಾವಣೆ ಮಾಡಿರುವುದಿಲ್ಲ. ಗುಲ್ಬರ್ಗ, ಬೀದರ, ಯಾದಗಿರಿ, ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ ವಿಭಾಗಗಳಲ್ಲಿ ಕರ್ತವ್ಯನಿರ್ವಹಿಸುತ್ತಿರುವ ವಿಜಾಪುರ ಜಿಲ್ಲೆಯ ಚಾಲನಾ ಸಿಬ್ಬಂದಿಯನ್ನು ಅವರ ಸೇವಾ ಜ್ಯೇಷ್ಠತೆ ಪರಿಗಣಿಸಿ ಹಂತ-ಹಂತವಾಗಿ ಪಾರದರ್ಶಕ ಮತ್ತು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುವುದು.
ಈಗಾಗಲೇ ವಿಜಾಪುರ ಮೂಲದ ಸಿಬ್ಬಂದಿ ಜೇಷ್ಠತಾ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಪಟ್ಟಿ ಸಿದ್ಧಪಡಿಸಿದ ನಂತರ ಸಂಸ್ಥೆಯ ಎಲ್ಲ ಘಟಕಗಳಲ್ಲಿ ಪ್ರದರ್ಶಿಸಿ ಸಿಬ್ಬಂದಿ ಗಮನಕ್ಕೆ ತರಲಾಗುವುದು. ಜ್ಯೇಷ್ಠತೆ ಪಟ್ಟಿ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ.
ವರ್ಗಾವಣೆ ಬಯಸುವ ಸಿಬ್ಬಂದಿಗೆ ಜನವರಿ 2014ರ ಅಂತ್ಯದೊಳಗಾಗಿ ಹಂತ-ಹಂತವಾಗಿ ಅವಕಾಶ ಸಿಗುವುದರಿಂದ ಯಾವುದೇ ಆಮಿಷಕ್ಕೆ ಒಳಗಾಗಬಾರದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

