ಬಳ್ಳಾರಿ

ಭ್ರಷ್ಟಾಚಾರ ನಿಯಂತ್ರಣಕ್ಕೆ ಆಗ್ರಹ

Published On :

ಬಳ್ಳಾರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರವನ್ನು ನಿಯಂತ್ರಿಸಿ ಮತ್ತು ಸಾರಿಗೆ ಸಂಸ್ಥೆಯ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿ ಜಪ್ತು ಮಾಡಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಕೆ. ವಿಜಯಕುಮಾರ್ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕರ ಮೇಲೆ ನಡೆಯುತ್ತಿರುವ ನಿರಂತರ ಕಿರುಕುಳ, ದಬ್ಬಾಳಿಕೆ, ದೌರ್ಜನ್ಯದಿಂದಾಗಿ ಆತ್ಮಹತ್ಯೆಯಂತಹ ಪ್ರಕರಣಗಳು ವರದಿಯಾಗುತ್ತಿವೆ. ಭ್ರಷ್ಟ ಅಧಿಕಾರಿಗಳ ಕಿರುಕುಳದಿಂದಾಗಿ ಕಾರ್ಮಿಕರು ನೆಮ್ಮದಿಯಿಂದ ಕೆಲಸ ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದರು.
ಸಾರಿಗೆ ಇಲಾಖೆಯ ಚಾಲಕ-ನಿರ್ವಾಹಕರ ಕೇವಲ ರು. 60-70ಗಳ ದೂರಿಗೆ ಯಾವುದೇ ಮೆಮೋ ನೀಡದೆ ಅಮಾನತುಗೊಳಿಸುವ ಹಿರಿಯ ಮೇಲಾಧಿಕಾರಿಗಳು, ನಂತರ ದೂರುಗಳ ಇತ್ಯರ್ಥಕ್ಕಾಗಿ ರು. 20 ಸಾವಿರ ಲಂಚ ಕೇಳುವರು.
ಇವರ ಕಿರುಕುಳಕ್ಕೆ ಬೇಸತ್ತ ಇಲಾಖೆ ಸಿಬ್ಬಂದಿ ಲಂಚ ನೀಡುವುದಾಗಿ ಒಪ್ಪಿಸಿ, ಅಧಿಕಾರಿಗಳನ್ನು ಲೋಕಾಯುಕ್ತಕ್ಕೆ ಹಿಡಿದುಕೊಟ್ಟಿದ್ದರೂ ನ್ಯಾಯಾಲಯದಲ್ಲಿ ರುಜುವಾತಾಗದೆ, ಮರಳಿ ವಾಪಸ್ ಬಂದು, ಹಿಡಿದುಕೊಟ್ಟವರಿಗೆ ಕಿರುಕುಳ ನೀಡುತ್ತಿದ್ದಾರೆ. ಮೇಲಾಗಿ ಇವರ ವಿರುದ್ಧ ಸರ್ಕಾರ  ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾನೂನು ಸಲಹೆಗಾರ ಮೃತ್ಯುಂಜಯ ಸ್ವಾಮಿ, ಸಿರುಗುಪ್ಪ ಘಟಕದ ಕಾರ್ಯದರ್ಶಿ ಜಗದೀಶ್ ಆಚಾರ್, ಜಿಲ್ಲಾಧ್ಯಕ್ಷ ಕರಣಂ ಕೃಷ್ಣ, ಎಸ್. ಪ್ರಶಾಂತ್, ಶಿವಪ್ರಕಾಶ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.