ಬಳ್ಳಾರಿ

ಗುತ್ತಿಗೆ ನೌಕರರ ಕಾಯಂಗೊಳಿಸಲು ಆಗ್ರಹ

Published On :

ಬಳ್ಳಾರಿ: ಹೈಕ ಪ್ರದೇಶದ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಗುತ್ತಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಜಿಲ್ಲಾ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಮಿತಿ ಜಿಲ್ಲಾಧ್ಯಕ್ಷ ಕೆ. ವಾಗೀಶ್ ನೇತೃತ್ವ ವಹಿಸಿ ಮಾತನಾಡಿ, ಆರೋಗ್ಯ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ (ಕೆಎಸ್‌ಎಪಿಎಸ್), ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ (ಎನ್‌ಆರ್‌ಎಚ್‌ಎಂ, ಆರ್‌ಸಿಎಚ್), ಆಯುಷ್, ರಾಷ್ಟ್ರೀಯ ಪರಿಷ್ಕೃತ ಕ್ಷಯರೋಗ ನಿಯಂತ್ರಣ ಯೋಜನೆ (ಆರ್‌ಎನ್‌ಟಿಸಿಪಿ) ಮತ್ತು ಐಸಿಟಿಸಿ ವಿಭಾಗಗಳಲ್ಲಿ ಕಳೆದ 10-15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಿದ್ದು, ಗುತ್ತಿಗೆ ನೌಕರರಿಂದ ಅಧಿಕ ಕೆಲಸ ಮಾಡಿಸಿಕೊಳ್ಳುವ ಸರ್ಕಾರ, ವೇತನ ಪರಿಷ್ಕರಣೆ ಮಾಡುವಲ್ಲಿ ಹಿಂಜರಿಯುತ್ತಿದೆ ಎಂದು ಆರೋಪಿಸಿದರು.
ಈ ಮೊದಲು ವರ್ಷಕ್ಕೆ ರು. 1000ದಿಂದ ರು. 1,500 ಹೆಚ್ಚಳ ಮಾಡುತ್ತಿದ್ದ ಸರ್ಕಾರ, ಕಳೆದ ಮೂರು ವರ್ಷಗಳಿಂದ ಅದನ್ನೂ ಮಾಡುತ್ತಿಲ್ಲ. ಇದರಿಂದ ಹೈದ್ರಾಬಾದ್-ಕರ್ನಾಟಕ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,500 ಗುತ್ತಿಗೆ ನೌಕರರೆಲ್ಲರೂ ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದ್ದು, ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸರ್ಕಾರಿ ಕಾಯಂ ನೌಕರರಿಗೆ ಮಾಡಿದಂತೆ 6ನೇ ವೇತನ ಆಯೋಗದ ಪ್ರಕಾರ ಗುತ್ತಿಗೆ ನೌಕರರಿಗೂ ವೇತನ ಹೆಚ್ಚಳ ಮಾಡಬೇಕು. ಹೈ-ಕ ಪ್ರದೇಶಕ್ಕೆ 371ನೇ ವಿಶೇಷ ಸ್ಥಾನ ಲಭಿಸಿದ್ದು, ಹೈ-ಕ ವರದಿಯಲ್ಲಿ ಸೂಚಿಸಿದಂತೆ ಈ ಭಾಗದ ಆರು ಜಿಲ್ಲೆಗಳ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ಕಾಯಂ ಮಾಡಬೇಕು. ನೌಕರರ ಸೇವೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವಿಲೀನಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಭಾಗೀಯ ಉಪಾಧ್ಯಕ್ಷ ಬಿ. ದೇವರಾಜ, ವೆಂಕಟೇಶ್, ಮರುಳಾರಾದ್ಯ, ಅಜಯ್, ಆನಂದ್, ಚಂದ್ರಪ್ಪ, ಶಶಿಕಲಾ, ವಸುಧಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.