ಬಳ್ಳಾರಿ

ಕಾಲುವೆ ಕಾಮಗಾರಿಗೆ ರು. 116 ಲಕ್ಷ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 13
ಬಳ್ಳಾರಿ ತಾಲೂಕಿನಲ್ಲಿರುವ ಕಾಲುವೆಗಳ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರು. 116 ಲಕ್ಷ ಬಿಡುಗಡೆಯಾಗಿದ್ದು, ಕಾಲುವೆಯಲ್ಲಿ ನೀರು ಖಾಲಿಯಾದ ಕೂಡಲೇ ಅದರ ದುರಸ್ತಿ ಕಾರ್ಯ, ಸ್ವಚ್ಛ ಕಾರ್ಯ ಮತ್ತು ಹೂಳು ತೆಗೆಯುವ ಕಾಮಗಾರಿಗಳನ್ನು ಕೈಗೊಂಡು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕೆಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜರುಗಿದ ಕೆಡಿಪಿ ಸಭೆಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧ್ಯಕ್ಷ ವಿ. ಗಾದಿಲಿಂಗಪ್ಪ ಈ ಸೂಚನೆ ನೀಡಿದರು.
ಬರುವ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಯೋಜನೆ ರೂಪಿಸಿ ಎಲ್ಲ ಪಿಡಿಓಗಳು ತಾ.ಪಂ.ಗೆ ಪತ್ರ ಬರೆದಲ್ಲಿ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆ ಉದ್ಭವಿಸಿದರೆ ಸಂಬಂಧಿಸಿದ ಪಿಡಿಓಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಕಾರ್ಯನಿರ್ವಾಹಕಾಧಿಕಾರಿ ಕೇಣಿ ಬಸಪ್ಪ ಮಾತನಾಡಿ, ಪಿಡಿಹಳ್ಳಿ ಹಾಗೂ ವೈ ಕಗ್ಗಲ್ನಲ್ಲಿ ಕೈಗೊಂಡಿದ್ದ ಚೆಕ್ಡ್ಯಾಂಗಳ ಕಾಮಗಾರಿ ಪೂರ್ಣಗೊಂಡಿದ್ದು, ಯರ್ರಂಗಳಿ ಗ್ರಾಮದಲ್ಲಿ ಚೆಕ್ಡ್ಯಾಂ ಕಾಮಗಾರಿಯನ್ನು ಮಾರ್ಚ್ 31ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿಗಳಿಗೆ ನೇಮಿಸಿದ ನೋಡಲ್ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪ್ರತಿ ತಿಂಗಳು ವರದಿಯನ್ನು ತಾ.ಪಂ.ಗೆ ಸಲ್ಲಿಸಬೇಕೆಂದು ಸೂಚಿಸಿದರು. ಮುಖ್ಯಮಂತ್ರಿಗಳು ಘೋಷಿಸಿರುವಂತೆ ನರೇಗಾ ಯೋಜನೆಯಡಿ ಪರಿಶಿಷ್ಟ ಜಾತಿ-ಪಂಗಡದ ವೈಯಕ್ತಿಕ ಕಾಮಗಾರಿಗಳು, ಶೌಚಾಲಯಗಳು ಹಾಗೂ ವಿವಿಧ ಅಂಶಗಳ ಕಾರ್ಯಕ್ರಮಗಳನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಶೌಚಾಲಯ ನಿರ್ಮಿಸಲು ಪ್ರತಿ ದಿನ 14 ಎನ್ಎಂಆರ್ ತೆಗೆಯುವಂತೆ ಪಿಡಿಓಗಳಿಗೆ ಸೂಚಿಸಿದರು.
ತಾಪಂ, ಜಿಪಂ, ಎಂಜಿನಿಯರಿಂಗ್ ವಿಭಾಗ, ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳ ಮಾಹಿತಿಯನ್ನು ಜನವರಿ 15ರೊಳಗಾಗಿ ವರ್ಕ್ ಸಾಫ್ಟ್ನಲ್ಲಿ ಅಪ್ಲೋಡ್ ಮಾಡಬೇಕು. ಗ್ರಾ.ಪಂ.ಯಲ್ಲಿ ನಿಗದಿಪಡಿಸಿದ ಕರವನ್ನು ಅವಧಿಯೊಳಗೆ ವಸೂಲಾತಿ ಮಾಡಬೇಕು ಹಾಗೂ ಗ್ರಾಮಸಭೆಗಳ ಮಾಹಿತಿಯನ್ನು ಪಂಚತಂತ್ರದಲ್ಲಿ ಅಳವಡಿಸಬೇಕು. ಲೋಕ್ ಅದಾಲತ್ಗೆ ನೀಡಿದ ಅಫಿಡವಿಟ್ನಲ್ಲಿರುವಂತೆ ಕಾಮಗಾರಿಗಳನ್ನು ಪ್ರಥಮಾದ್ಯತೆ ಮೇಲೆ ಕೈಗೊಳ್ಳಬೇಕೆಂದು ಪಿಡಿಓಗಳಿಗೆ ಸೂಚಿಸಿದರು. ಪಡಿತರ ಚೀಟಿ ವಿತರಣೆಗೆ ಪಿಡಿಓಗಳನ್ನು ನೇಮಿಸದೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆಹಾರ ಇಲಾಖೆ ಶಿರಸ್ತೇದಾರ್ಗೆ ತಿಳಿಸಿದರು.  
ಶ್ರೀವಳ್ಳಿ ಸ್ವಾಗತಿಸಿದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಮರೆಮ್ಮ, ಮತ್ತಿತರ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.