ಬಳ್ಳಾರಿ

ಗುಣಾತ್ಮಕ ಶಿಕ್ಷಣಕ್ಕೆ ಸಮುದಾಯದ ಪಾತ್ರ ಅಗತ್ಯ

Published On :

ಸಿರುಗುಪ್ಪ: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಾಕ ಶಿಕ್ಷಣ ಹೆಚ್ಚಳಕ್ಕೆ ಸಮುದಾಯದ ಪಾತ್ರ ಅತಿ ಮುಖ್ಯ ಎಂದು ಶಾಸಕ ಬಿ.ಎಂ. ನಾಗರಾಜ ತಿಳಿಸಿದರು.
ತಾಲೂಕಿನ ತಾಳೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡ ಹಾಗೂ ಸರ್ಕಾರಿ ಪ್ರೌಢಶಾಲಾ ಆಟದ ಮೈದಾನ ಉದ್ಘಾಟಿಸಿ ನಂತರ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಾಕ ಶಿಕ್ಷಣವನ್ನು ಕಲ್ಪಿಸುವ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಖಾಸಗಿ ಶಾಲೆಗಿಂತಲೂ ಹೆಚ್ಚಿನ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಪಾತ್ರವಾಹಿಸುವುದನ್ನು ಬಿಟ್ಟು. ಸರ್ಕಾರಿ ಶಾಲೆಗಳನ್ನು ನೋಡಿ ಮೂಗು ಮುರಿದು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವುದು ಸರಿಯಲ್ಲ ಎಂದು ಸಲಹೆ ನೀಡಿದರು.
ಉದ್ಘಾಟನೆ: ರು. 10.54 ಲಕ್ಷ ವೆಚ್ಚದಲ್ಲಿ ನಿಮಾರ್ಣಗೊಂಡ ಸ.ಹಿ.ಪ್ರಾ. ಶಾಲೆಯ ಮೂರು ಕೊಠಡಿ, ರು. 60 ಸಾವಿರ ವೆಚ್ಚದ ಅಡುಗೆ ಕೋಣೆ, ರು. 75 ಸಾವಿರ ವೆಚ್ಚದ ಶೌಚಾಲಯ, ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಜಯರಾಮರೆಡ್ಡಿ ತಮ್ಮ ಪತ್ನಿ ಪಾರ್ವತಮ್ಮ ಜ್ಞಾಪಾಕಾರ್ಥ ರು. 1.5 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕುಡಿಯುವ ನೀರಿ ಕೋಣೆ ಉದ್ಘಾಟಿಸಿದರು.
ಜಿಪಂ ಸದಸ್ಯೆ ಮಲ್ಲಮ್ಮ, ತಾಪಂ ಸದಸ್ಯೆ ಯಶೋದಮ್ಮ, ಗ್ರಾಪಂ ಅಧ್ಯಕ್ಷೆ ಸಾವಿತ್ರಮ್ಮ, ಎಂ. ಅರುಣಪ್ರತಾಪ ರೆಡ್ಡಿ, ಸೂರ್ಯಕಾಂತ ರೆಡ್ಡಿ, ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ, ತಾಪಂ ಇಒ ಡಾ. ರಾಧಾಕೃಷ್ಣರೆಡ್ಡಿ, ಲಕ್ಷ್ಮೀಕಾಂತ ರೆಡ್ಡಿ, ಗುಬ್ಬಳ್ಳಿ ಮಂಜುನಾಥ ರೆಡ್ಡಿ, ಪಾಂಡುರಂಗ ರೆಡ್ಡಿ, ಜಯರಾಮರೆಡ್ಡಿ, ಗೋವಿಂದ ರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.