ನಾಳೆ ವೃತ್ತಿ ತರಬೇತಿ ಶಿಬಿರ
ಬಳ್ಳಾರಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು ವಾರ್ತಾ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಜ. 18ರಂದು ಪ್ರವಾಸೋದ್ಯಮ ಮತ್ತು ಮಾಧ್ಯಮ ಕುರಿತು ವಿಚಾರ ಸಂಕಿರಣ ಹಾಗೂ 19ರಂದು ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಪತ್ರಕರ್ತರಿಗಾಗಿ ವೃತ್ತಿ ತರಬೇತಿ ಶಿಬಿರ ಹಮ್ಮಿಕೊಂಡಿದೆ.
ಜ. 18ರಂದು ಬೆಳಗ್ಗೆ 10ಕ್ಕೆ ನಡೆಯುವ ವಿಚಾರ ಸಂಕಿರಣದ ಸಾನ್ನಿಧ್ಯವನ್ನು ಮುರುಘಾ ಶರಣರು ವಹಿಸುವರು. ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಉದ್ಘಾಟಿಸುವರು. ಎಂಎಲ್ಸಿ ಜಿ.ಎಚ್. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಎಂಎಲ್ಸಿ ಡಾ.ಎ.ಎಚ್. ಶಿವಯೋಗಿಸ್ವಾವು, ಸಂಸದ ಜನಾರ್ದನಸ್ವಾಮಿ, ಶಾಸಕ ಡಿ. ಸುಧಾಕರ್, ಟಿ. ರಘುಮೂರ್ತಿ, ಬಿ.ಜಿ. ಗೋವಿಂದಪ್ಪ, ಎಸ್. ತಿಪ್ಪೇಸ್ವಾಮಿ, ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ ಹಾಗೂ ಜಿ. ರಘು ಆಚಾರ್ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 12ರ ಗೋಷ್ಠಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಛಾಯಾಚಿತ್ರಗಳ ಮಹತ್ವ ಕುರಿತು ಚಿತ್ರದುರ್ಗ ಜಿಪಂ ಸಿಇಒ ಕೆ.ಎಂ. ನಾರಾಯಣಸ್ವಾಮಿ ಮಾತನಾಡುವರು, 2.30ರ ಗೋಷ್ಠಿಯಲ್ಲಿ ಮುದ್ರಣ ಮಾಧ್ಯಮ ಮತ್ತು ಪ್ರವಾಸೋದ್ಯಮ ಕುರಿತು ಹಿರಿಯ ಪತ್ರಕರ್ತ ತಿಮ್ಮಪ್ಪ ಭಟ್, ಬಿ.ಎನ್. ಮಲ್ಲೇಶ್ ವಿಷಯ ಮಂಡಿಸಲಿದ್ದಾರೆ. ಸಂಜೆ 4ಕ್ಕೆ 3ನೇ ಗೋಷ್ಠಿಯಲ್ಲಿ ಪ್ರವಾಸೋದ್ಯಮ ಮತ್ತು ವಿದ್ಯುನ್ಮಾನ ಕುರಿತು ಪತ್ರಕರ್ತ ಬೆಲಗೂರು ಸಮೀವುಲ್ಲಾ, ಬಸವರಾಜ್ ಮದ್ನೂರು ಉಪನ್ಯಾಸ ನೀಡುವರು.
ಜ. 19ರಂದು ಚಿತ್ರದುರ್ಗದಲ್ಲಿ ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಪತ್ರಕರ್ತರಿಗೆ ಬೆಳಗ್ಗೆ 10.30ಕ್ಕೆ ವೃತ್ತಿ ತರಬೇತಿ ಶಿಬಿರವನ್ನು ಜಗಳೂರು ಶಾಸಕ ಎಚ್.ಪಿ. ರಾಜೇಶ್ ಉದ್ಘಾಟಿಸುವರು. ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನರೇನಹಳ್ಳಿ ಅರುಣ್ಕುಮಾರ್ ಅಧ್ಯಕ್ಷತೆ ವಹಿಸುವರು. ವೃತ್ತಿ ತರಬೇತಿ ಶಿಬಿರದಲ್ಲಿ 2 ಗೋಷ್ಠಿಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

