ಅನಾಮಧೇಯ ವ್ಯಕ್ತಿ ಶವ ಪತ್ತೆ
ಬಳ್ಳಾರಿ: ಅಪರಿಚಿತ ವ್ಯಕ್ತಿಯ ಶವವೊಂದು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ರೂಪನಗುಡಿ ರಸ್ತೆ ತಿರುಮಲನಗರ ಬಿ ಕ್ಯಾಂಪ್ ಬಳಿಯ ಎಚ್ಎಲ್ಸಿ 15ನೇ ಉಪ ಕಾಲುವೆಯಲ್ಲಿ ಪತ್ತೆಯಾಗಿದೆ. ಅಂದಾಜು 25ರಿಂದ 30 ವರ್ಷ ವಯಸ್ಸಿನ ಮೃತನ ಶವವು ಜನವರಿ 14ರಂದು ಬೆಳಗ್ಗೆ 7.30ಕ್ಕೆ ಕಂಡುಬಂದಿದ್ದು, 5.6 ಅಡಿ ಎತ್ತರ, ದೃಢವಾದ ಮೈಕಟ್ಟು ಹೊಂದಿದ್ದಾನೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಎಎಸ್ಐ ಕೋರಿದ್ದಾರೆ.
ಆಸ್ತಿ ವಿವಾದ: ವ್ಯಕ್ತಿ ಕೊಲೆ
ಹೂವಿನಹಡಗಲಿ: ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯೋರ್ವನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ತಾಲೂಕಿನ ದಾಸರಹಳ್ಳಿ ತಾಂಡಾದಲ್ಲಿ ಗುರುವಾರ ರಾತ್ರಿ ನಡೆದಿದೆ. ಲೋಕ್ಯಾನಾಯ್ಕ (50) ಎಂಬಾತನೇ ಕೊಲೆಯಾಗಿರುವ ವ್ಯಕ್ತಿ. ಕೌಟಂಬಿಕ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಜಗಳ ಉಂಟಾಗಿದ್ದು, ಈತನ ಸಹೋದರ ಸಂಬಂಧಿ ಕೂಬ್ಯಾನಾಯ್ಕ (40) ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಗುರುವಾರ ರಾತ್ರಿಯೇ ಬಂಧಿಸಿದ್ದಾರೆ. ಈ ಕುರಿತು ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಪ್ರಕಾಶ್ ರಾಠೋಡ್ ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

