ಇಂದು ಜಿಪಂ ಅಧ್ಯಕ್ಷೆ ಶೋಭಾಗೆ ಸನ್ಮಾನ
ಹೊಸಪೇಟೆ: ಬಳ್ಳಾರಿ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ದೇವರಾಜ ಅರಸು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸನ್ಮಾನ ಕಾರ್ಯಕ್ರಮ 27ನೇ ವಾರ್ಡ್ನ ಶ್ರೀ ನರಹರಿ ಆಶ್ರಮದಲ್ಲಿ ಜ. 19ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಅವರನ್ನು ಸನ್ಮಾನಿಸಲಾಗುವುದು. ಪ್ರವರ್ಗ- 1ರ ಗುಂಪಿನಲ್ಲಿ ಬರುವ ವಿಜಯನಗರ ಕ್ಷೇತ್ರದ ವ್ಯಾಪ್ತಿಯ ಗಂಗಾಮತಸ್ಥರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಜಾತಿವಾರು ಸಮೀಕ್ಷೆಗೆ ಚಾಲನೆ ನೀಡಲಾಗುವುದು. ಸಮಾರಂಭದಲ್ಲಿ ಜಿಲ್ಲಾ ಗಂಗಾಮತಸ್ಥರ ಸಂಘದ ಅಧ್ಯಕ್ಷ ಬಿ. ಮೌಲಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್. ಕೊಟ್ರೇಶ್, ನಾಗೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಯಮ್ಮ ಹಾಗೂ ಗಂಗಾಮತ ಸಮಾಜದ ಮುಖಂಡರಾದ ಜಿ. ತಮ್ಮನಾಳಪ್ಪ, ಎ.ಕೆ. ರಾಮಸ್ವಾಮಿ, ಕೆ. ರಿಂದಪ್ಪ ಸೇರಿದಂತೆ ಇತರರು ಭಾಗವಹಿಸುವರು. ಹೊಸಪೇಟೆ ನಗರ ಘಟಕಾಧ್ಯಕ್ಷ ಬಿ. ಸುದರ್ಶನ್ ಅಧ್ಯಕ್ಷತೆ ವಹಿಸುವರು ಎಂದು ವೈ. ಯಮುನೇಶ್, ರವಿಶಂಕರ್ ದೇವರಮನಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

