ಬಳ್ಳಾರಿ

ಸರ್ಕಾರ ಪೊಲೀಸ್ ಇಲಾಖೆಗೆ ಭದ್ರತೆ ನೀಡಲಿ

Published On :

ಬಳ್ಳಾರಿ: ಸಾರ್ವಜನಿಕರ ಶಾಂತಿಗಾಗಿ ಶ್ರಮಿಸುತ್ತಿರುವ ಪೊಲೀಸ್ ಇಲಾಖೆಗೆ ಸರ್ಕಾರ ಸೂಕ್ತ ಭದ್ರತೆ, ನೈತಿಕ ಸ್ಥೈರ್ಯ ನೀಡುವ ಯೋಜನೆಗಳನ್ನು ರೂಪಿಸಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಿವಲಿಂಗಪ್ಪ ಜ್ಯಾಲಿಕಡ್ಡಿ ಅಭಿಪ್ರಾಯಿಸಿದರು. ಬಳ್ಳಾರಿ ತಾಲೂಕು ಪಂಚಮಸಾಲಿ ಸಮಾಜದ ವತಿಯಿಂದ ನಗರದಲ್ಲಿ ಏರ್ಪಡಿಸಿದ್ದ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇಲಾಖೆಯ ನಿಷ್ಪಕ್ಷಪಾತ ಕರ್ತವ್ಯಕ್ಕೆ ಸಹಕಾರ ನೀಡಿದ್ದಲ್ಲಿ ಇನ್ನು ಹೆಚ್ಚಿನ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಲು ಸಾಧ್ಯ ಎಂದ ಅವರು, ಕರ್ತವ್ಯ ನಿಷ್ಠೆ ಮೆರೆದ ದಿ. ಬಂಡೆ ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು. ಮಾಲತೇಶ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಕೀಲ ಮಹೇಶ, ನೀಲನಗೌಡ, ವಿಜಯಕುಮಾರ, ಅಣ್ಣಿಗೇರಿ ಸೇರಿದಂತೆ ಇತರರು ಇದ್ದರು. ಸಂಘದ ಕಾರ್ಯದರ್ಶಿ ಜೆ. ಮಹೇಶ ಕಾರ್ಯಕ್ರಮ ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.