ಬಳ್ಳಾರಿ

ಇಂದು ಕಾರ್ಯಾಗಾರ

Published On :

ಹಗರಿಬೊಮ್ಮನಹಳ್ಳಿ: ಸ್ವಾಮಿ ವಿವೇಕಾನಂದರ 151ನೇ ಜಯಂತಿ, ಮತ್ತು ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ಜನ್ಮದಿನಾಚರಣೆ ನಿಮಿತ್ತ ಜ. 20ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಆವರಣದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಇತಿಹಾಸ ವಿಕೃತೀಕರಣ ಹಾಗೂ ಸಂಕಲ್ಪ ಬೋಧನಾ ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ತಾಲೂಕು ಘಟಕ ಹಮ್ಮಿಕೊಂಡಿದೆ. ಪ್ರೊ.ಕೃ. ನರಹರಿ ಉಪನ್ಯಾಸ ನೀಡಲಿದ್ದು, ಡಿಡಿಪಿಐ ವೀರಣ್ಣ ಜತ್ತಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ವಿದ್ಯಾಕೇಂದ್ರದ ಧ್ಯಕ್ಷ ಡಾ.ಎಚ್.ಎನ್.ಪಿ. ವಿಠಲ್ ಅಧ್ಯಕ್ಷತೆ ವಹಿಸುವರು. ಬಿಇಒ ಕೆ. ರಾಮನಗೌಡ, ತೇನ್‌ಸಿಂಗ್ ನಾಯ್ಕ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ. ಜ್ಞಾನೇಶ್ವರಯ್ಯ, ಗುಲ್ಬರ್ಗ ವಿಭಾಗ ಕಾರ್ಯದರ್ಶಿ ಎಂ. ಗುಂಡಾಚಾರ್, ತಾಲೂಕಾಧ್ಯಕ್ಷ ಎಸ್.ಸಿ.ಬಂಡಿವಾಡ, ಜಿಲ್ಲಾ ಉಪಾಧ್ಯಕ್ಷ ಕೆ.ವಿ. ಲೋಕೇಶ, ಬಿ.ಜಿ. ಸಿದ್ದನಗೌಡ, ಸಿದ್ದೇಶ್ವರ ಭಾಗವಹಿಸುತ್ತಾರೆಂದು ರಾಜ್ಯ ಉಪಾಧ್ಯಕ್ಷ ಕೊಟ್ರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.