ಬಳ್ಳಾರಿ

ಪೋಲಿಯೋ ಮುಕ್ತ ಜಿಲ್ಲೆಯನ್ನಾಗಿಸಿ: ಶೋಭಾ

Published On :

ಬಳ್ಳಾರಿ: ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಕರೆ ನೀಡಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು, ಸರ್ಕಾರೇತರ ಸಂಸ್ಥೆಗಳು, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಎಲ್ಲ ಇಲಾಖೆಗಳು ಸ್ವಯಂಪ್ರೇರಿತರಾಗಿ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ತೊಡಗಬೇಕು. ಜಿಲ್ಲೆಯಲ್ಲಿರುವ ಮಕ್ಕಳಷ್ಟೇ ಅಲ್ಲ, ಹೊರ ಜಿಲ್ಲೆಗಳು, ಹೊರ ಪ್ರದೇಶಗಳಿಂದ ಆಗಮಿಸುವ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು. ಹೊಲ, ಗದ್ದೆಗಳಲ್ಲಿ, ತಾಂಡ ಹಾಗೂ ಮುಖ್ಯವಾಹಿನಿಯಲ್ಲಿಲ್ಲದ ಪ್ರದೇಶಗಳಲ್ಲಿರುವ ಮಕ್ಕಳಿಗೂ ಲಸಿಕೆ ಹಾಕಲು ಸಂಬಂಧಿಸಿದ ಇಲಾಖೆಗಳು ಶ್ರಮಿಸಬೇಕು ಎಂದರು.
ಜಿಲ್ಲೆಯಲ್ಲಿ ಜನವರಿ 19ರಿಂದ 22ರ ವರಗೆ ಮೊದಲನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಳ್ಳಾರಿ ಜಿಲ್ಲೆ ಒಟ್ಟು 24,77,356 ಜನಸಂಖ್ಯೆ ಹೊಂದಿದೆ. ಜಿಲ್ಲಾದ್ಯಂತ ಲಸಿಕೆ ಹಾಕಲು ಸರ್ಕಾರಿ ಆಸ್ಪತ್ರೆ, ಶಾಲೆ ಹಾಗೂ ಅಂಗನವಾಡಿ ಕೇಂದ್ರ ಗುರುತಿಸಲಾಗಿದೆ. ಈ ಪೈಕಿ ನಗರ ಪ್ರದೇಶಗಳಲ್ಲಿ 444, ಗ್ರಾಮೀಣ ಪ್ರದೇಶದಲ್ಲಿ 1216, ಜಿಲ್ಲೆಯ ಒಟ್ಟು 1660 ಬೂತ್‌ಗಳನ್ನು ತೆರೆಯಲಾಗಿದೆ. ಈ ಬಾರಿ ನಗರ ಪ್ರದೇಶಗಳಲ್ಲಿ 1,30,668 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 2,33,214 ಜಿಲ್ಲೆಯ ಒಟ್ಟು 3,63,882 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 2822 ಲಸಿಕೆ ನೀಡುವವರನ್ನು ತರಬೇತಿಸಲಾಗಿದೆ. ಅಲ್ಲದೇ ನಗರ ಪ್ರದೇಶಗಳಲ್ಲಿ 96 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 209 ಜಿಲ್ಲೆಯ ಒಟ್ಟು 305 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪ್ರತಿ ತಾಲೂಕಿಗೆ ಒಬ್ಬರಂತೆ, 7 ನೋಡಲ್ ಅಧಿಕಾರಿಗಳನ್ನು ಹಾಗೂ ನಗರ ಬಳ್ಳಾರಿ ಮತ್ತು ಹೊಸಪೇಟೆಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಹಿಂದೆ ಎಷ್ಟೇಬಾರಿ ಪೋಲಿಯೋ ಲಸಿಕೆ ಪಡೆದಿದ್ದರೂ ಈ ಬಾರಿಯೂ ಆಯಾ ನಿಗದಿತ ದಿನಾಂಕಗಳಂದು ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ರೋಗದಿಂದ ಆಗುವ ಅಂಗವಿಕಲತೆ ತಪ್ಪಿಸಲು ಕೋರಲಾಗಿದೆ ಎಂದರು.  
ಜಿಲ್ಲಾ ನೋಡಲ್ ಅಧಿಕಾರಿ ಡಾ. ಶಿವರುದ್ರಸ್ವಾಮಿ, ಆರ್‌ಸಿಎಚ್ ಅಧಿಕಾರಿ ಡಾ. ಅನಿಲ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ, ಶಿಕ್ಷಣಾಭಿವೃದ್ಧಿ ಅಧಿಕಾರಿ ಹೊನ್ನೂರಪ್ಪ, ತಾಪಂ ಇಒ ಕೇಣಿಬಸಪ್ಪ, ಬಿ.ಎಂ. ಕಾಳೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.