ಬಳ್ಳಾರಿ

ಜಿಎಸ್ಸೆಸ್ಗೆ ಜ್ಞಾನಪೀಠ ಪ್ರಶಸ್ತಿ ಕೈತಪ್ಪಿದ್ದು ಖೇದಕರ

Published On :

ಹೊಸಪೇಟೆ: ನವ್ಯ ಹಾಗೂ ನವೋದಯ ಕಾಲದ ಕವಿಗಳ ಸಾಲಿಗೆ ಸೇರಿದ ಜಿ.ಎಸ್. ಶಿವರುದ್ರಪ್ಪನವರು ಕುವೆಂಪು ಬೇಂದ್ರೆ ಅಡಿಗ ಬಿ.ಎಂ. ಶ್ರೀಗಳ ಯಾವ ಸಾಹಿತ್ಯಕ್ಕೂ ಕಡಿಮೆ ಇಲ್ಲದಂತೆ ಸಾಹಿತ್ಯ ಕೃಷಿ ಮಾಡಿದ ಅವರು ಜ್ಞಾನಪೀಠ ಪ್ರಶಸ್ತಿಯಿಂದ ವಂಚಿತರಾದದ್ದು ಖೇದದ ಸಂಗತಿ ಎಂದು ಹೊಸಪೇಟೆ ವಿಜಯನಗರ ಕಾಲೇಜು ಉಪನ್ಯಾಸಕ ಎಚ್.ಎಂ. ನಿರಂಜನ್ ಹೇಳಿದರು.
ತಾಲೂಕಿನ ಕಮಲಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಮಲಾಪುರ ಹೋಬಳಿ ಘಟಕ ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರ ಭಾವಶ್ರದ್ಧಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಎಸ್ಎಸ್ ಅವರ ಸಾಹಿತ್ಯ ಪ್ರಕಾರಗಳಲ್ಲಿ ಸೃಜನಶೀಲತೆ ಸಂಶೋಧನಾ ವಿಮರ್ಶೆ ಕೂಡಿಕೊಂಡಿರುವುದು ವಿಶೇಷ. ವಿಧಿ-ವಿಧಾನ, ಸಂಪ್ರದಾಯಗಳನ್ನು ಧಿಕ್ಕರಿಸಿದ ನಿಜವಾದ ಜಂಗಮಶೀಲ ವ್ಯಕ್ತಿ. ಅವರು ರಚಿಸಿದ ಸೌಂದರ್ಯ ಸಮೀಕ್ಷೆ ಹಾಗೂ ಕಾವ್ಯಾರ್ಥ ಚಿಂತನ ಕೃತಿಗಳು ಜ್ಞಾನಪೀಠ ಪ್ರಶಸ್ತಿಗೆ ಯೋಗ್ಯವಾದ ಕೃತಿಗಳು ಎಂದು ಜಿಎಸ್ಎಸ್ ಅವರ ನಿದರ್ಶನಗಳನ್ನು ಕಣ್ಣಿಗೆ ಕಟ್ಟುವಂತೆ ಅವರು ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಮಲಾಪುರ ಹೋಬಳಿ ಕಸಾಪ ಅಧ್ಯಕ್ಷ ಡಾ. ದಯಾನಂದ ಕಿನ್ನಾಳ್ ಸಭೆ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು. ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಾಗರಾಜ ಪತ್ತಾರ ಜಿಎಸ್ಎಸ್ ಅವರ ಎದೆ ತುಂಬಿ ಹಾಡಿದೆನು, ಎಲ್ಲೋ ಹುಡುಕಿದೆ ಇಲ್ಲದ ದೇವರ, ಸ್ತ್ರೀ ಎಂದರೆ ಅಷ್ಟೆ ಸಾಕೆ? ಪ್ರೀತಿ ಇಲ್ಲದ ಮೇಲೆ ಹೂವು ಅರಳಿತು ಹೇಗೆ ಎಂಬ ಕಾವ್ಯಗಳಿಗೆ ರಾಗ ಸಂಯೋಜಿಸಿ ಹಾಡಿದರು. ಮೀನಾಕ್ಷಿ, ಜ್ಯೋತಿ ಪ್ರಾರ್ಥಿಸಿದರು. ಉಪನ್ಯಾಸಕ ಶಿವಕುಮಾರ ಮಠದ ಸ್ವಾಗತಿಸಿದರು. ಕೆ.ಬಿ. ಮಂಜುನಾಥ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.