ಬಳ್ಳಾರಿ

ಇಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

Published On :

ಬಳ್ಳಾರಿ: ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜ. 23ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ಕ್ಕೆ ನಗರದ ಮುನ್ಸಿಪಲ್ ಕಾಲೇಜು ಮೈದಾನ, ರಾಯಲ್ ವೃತ್ತ, ರೇಲ್ವೆ ಸ್ಟೇಷನ್ ರಸ್ತೆ, ಮೋತಿ ವೃತ್ತದಿಂದ ರಂಗಮಂದಿರದ ವರೆಗೆ ಶಿವಯೋಗಿ ಸಿದ್ಧರಾಮೇಶ್ವರರ ಸ್ತಬ್ಧಚಿತ್ರ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ನೂರಾರು ಕಲಾವಿದರನ್ನೊಳಗೊಂಡ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿವೆ. ನಂತರ ರಂಗಮಂದಿರದಲ್ಲಿ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ನೆಡೆಯಲಿದೆ. ದಿನಾಚರಣೆ ನಿಮಿತ್ತ ಕವಿತಾ ವಸಂತಕುಮಾರ್ ಮತ್ತು ತಂಡ ವಚನ ಗಾಯನ ಪ್ರಸ್ತುತಪಡಿಸಲಿದೆ. ಸರ್ಕಾರಿ ಪಪೂ ಕಾಲೇಜಿನ ಕನ್ನಡ ಉಪನ್ಯಾಸಕಿ ಕೆ.ವಿ. ಜಯಲಕ್ಷ್ಮೀ ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ಸಂಸದರು, ಶಾಸಕರು, ವಿಪ ಸದಸ್ಯರು, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್, ಮತ್ತಿತರ ಅಧಿಕಾರಿಗಳು, ಸಿದ್ಧರಾಮೇಶ್ವರ ತತ್ವಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.