ಬಳ್ಳಾರಿ

ಮಹಿಳೆಯರ ಅಭಿವೃದ್ಧಿಗೆ ಶ್ರಮಿಸಿ: ಶೋಭಾ

Published On :

ಹೊಸಪೇಟೆ: ನಗರದ ಸ್ಲಂ ಪ್ರದೇಶದಲ್ಲಿ ಸಹಕಾರ ಸಂಘಗಳು ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಹೇಳಿದರು.
ನಗರದಲ್ಲಿ ಶ್ರೀಲಕ್ಷ್ಮೀ ಮಹಿಳಾ ಪತ್ತಿನ ಸಹಕಾರಿ ಸಂಘ ಹಮ್ಮಿಕೊಂಡಿದ್ದ ಷೇರು ಪ್ರಮಾಣಪತ್ರ ಮತ್ತು ಸದಸ್ಯತ್ವ ಗುರುತಿನ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಉಳಿತಾಯ ಮಾಡಿ ಸ್ವಾವಲಂಬನೆ ಸಾಧಿಸಬೇಕು. ಖಾಸಗಿ ವ್ಯಕ್ತಿ ಕಂಪನಿಗಳಿಂದ ಬಡ್ಡಿ ಸಾಲ ಪಡೆದು ಶೋಷಣೆಗೆ ಒಳಗಾಗದೇ ತಮ್ಮದೇ ಆದ ಸಹಕಾರ ಸಂಘಗಳ ಮೂಲಕ ಸಾಲ ಪಡೆಯಬೇಕು ಎಂದು ಹೇಳಿದರು.
ಸಮಾಜ ಸೇವಕ ದೀಪಕ್ ಕುಮಾರ್ ಸಿಂಗ್ ಮಾತನಾಡಿ, ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರು ಮಹಿಳೆಯರಿಗಾಗಿಯೇ ಮಹಿಳಾ ಬ್ಯಾಂಕ್ ಆರಂಭಿಸಿದ್ದಾರೆ. ಈ ಬ್ಯಾಂಕ್‌ಗಳ ಮೂಲಕ ಮಹಿಳೆಯರು ಸ್ವಾವಲಂಬನೆ ಸಾಧಿಸಬೇಕು ಎಂದರು.
ಸಹಕಾರಿ ಸಂಘದ ಅಧ್ಯಕ್ಷೆ ಲಕ್ಷ್ಮಿದೇವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಮಮತಾ ಸುರೇಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅನ್ನದಾನ ರೆಡ್ಡಿ, ಜೆ. ವಸಂತ, ತಾಲೂಕು ಪಂಚಾಯಿತಿ ಸದಸ್ಯ ಕೋರಿ ಫಕೀರಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಡಾ. ಉಮೇಶ್, ಸ್ಥಳೀಯ ಮುಖಂಡ ಗುಜ್ಜಲ್ ನಾಗರಾಜ್, ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸುನೀತ ಅನ್ವೇಕರ್, ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಎಂ.ಸಿ. ವೀರಸ್ವಾಮಿ, ಗುತ್ತಿಗೆದಾರ ರಾಮಕೃಷ್ಣ, ಹುಲುಗಪ್ಪ, ದಾನಪ್ಪ ಮರಿದಾಸ ಭಾಗವಹಿಸಿದ್ದರು.
ರವಿಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.