ಬಳ್ಳಾರಿ

ಗಂಗಾಮತ ಅಭಿವೃದ್ಧಿಗೆ ಶ್ರಮಿಸಿ

Published On :

ಹೊಸಪೇಟೆ: ಗಂಗಾಮತ ಸಮಾಜ ಹಿಂದುಳಿದ ಸಮುದಾಯವಾಗಿದ್ದು, ಸಮಾಜದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಹೇಳಿದರು.
ನಗರದ ನರಹರಿ ಆಶ್ರಮದಲ್ಲಿ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ದೇವರಾಜ ಅರಸು ಸಾಮಾಜಿಕ, ಶೈಕ್ಷಣಿಕ ಸೇವಾ ಟ್ರಸ್ಟ್ ಮತ್ತು ಗಂಗಾಮತ ಸಮಾಜದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಹಾಗೂ ಗಂಗಾಮತಸ್ಥರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಜಾತಿವಾರು ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿ, ಸರ್ಕಾರ ಈಗಾಗಲೆ ಸಮಾಜ ಸೇರಿದಂತೆ ಹಿಂದುಳಿದ ವರ್ಗಗಳಿಗೆ ಹಲವಾರು ಸೌಲಭ್ಯಗಳನ್ನು ಘೋಷಿಸಿದೆ. ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಮುಂದಾಗಬೇಕು ಎಂದರು.
ಸಮಾಜದ ಮುಖಂಡ ವೈ. ಯಮುನೇಶ್ ಮಾತನಾಡಿ, ಹಿಂದುಳಿದ ವರ್ಗಗಳ ಜಾತಿಗಣತಿ ನಡೆಸುವಂತೆ ಸುಪ್ರೀಂ ಕೋರ್ಟ್ 3 ದಶಕಗಳ ಹಿಂದೆಯೇ ಆದೇಶ ನೀಡಿದೆ. ಆದರೆ ದೇಶದ ಯಾವುದೆ ರಾಜ್ಯದಲ್ಲಿಯೂ ಜಾತಿ ಗಣತಿ ಸಮೀಕ್ಷೆ ನಡೆದಿಲ್ಲ. ರಾಜ್ಯದಲ್ಲಿ ಬರುವ ಏಪ್ರಿಲ್‌ನಲ್ಲಿ ಗಣತಿಗೆ ಸರ್ಕಾರ ತೀರ್ಮಾನಿಸಿತ್ತು. ಆದರೆ ಲೋಕಸಭಾ ಚುನಾವಣೆ ಇದಕ್ಕೆ  ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಗಣತಿ ಕಾರ್ಯ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಹೇಳಿದರು.
ಆರ್. ಕೊಟ್ರೇಶ್, ಡಾ.ಬಿ. ಗೋವಿಂದರಾಜ್ ಮಾತನಾಡಿದರು. ಬಿ. ಸುದರ್ಶನ್ ಅಧ್ಯಕ್ಷತೆ ವಹಿಸಿದ್ದರು. ನಾಗೇನಹಳ್ಳಿ ಗ್ರಾಪಂ ಅಧ್ಯಕ್ಷೆ ತಾಯಮ್ಮ ಹನುಮಂತಪ್ಪ, ಎ.ಕೆ. ರಾಮಸ್ವಾಮಿ, ತಮ್ಮನಳಪ್ಪ, ಬಸವರಾಜ ನಾಲ್ವತವಾಡ, ಕೆ. ಗಾಳೆಪ್ಪ, ಕೆ. ರಿಂದಪ್ಪ, ಅಭಿಮನ್ಯು, ರವಿಶಂಕರ್ ದೇವರಮನಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.