ಸಮರ್ಪಕ ಕುಡಿವ ನೀರಿಗಾಗಿ ಪೌರಾಯುಕ್ತರಿಗೆ ಮನವಿ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಜ. 23
ನಗರದ ಎಲ್ಲ ವಾರ್ಡ್ಗಳಿಗೆ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಬೇಕು ಮತ್ತು ನಗರದ ಎಲ್ಲ ಚಂರಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಬುಧವಾರ ನಗರಸಭೆ ಪೌರಾಯುಕ್ತ ಮಹ್ಮದ್ ಮುನೀರ್ಗೆ ಮನವಿಪತ್ರ ಸಲ್ಲಿಸಿದರು.
ನಗರದ ಬಹುತೇಕ ವಾರ್ಡ್ಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ತಕ್ಷಣ ಈ ಸಮಸ್ಯೆ ಬಗೆಹರಿಸಬೇಕು. ನಗರದಲ್ಲಿರುವ ಒಳಚರಂಡಿ ಹಾಗೂ ಹೊರ ಚರಂಡಿಗಳು ಸ್ವಚ್ಛತೆ ಇಲ್ಲದೆ ಕೊಳೆತು ದುರ್ವಾಸನೆ ಬೀರುತ್ತಿವೆ. ಚರಂಡಿಗಳಲ್ಲಿ ನೀರು ಮುಂದಕ್ಕೆ ಹರಿಯದೆ ಇರುವುದರಿಂದ ಸೊಳ್ಳೆಗಳು ಹುಟ್ಟಿಕೊಂಡಿವೆ. ಇದರಿಂದ ಜನತೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ತಕ್ಷಣ ನಗರಸಭೆಯವರು ನಿತ್ಯ ಫಾಗಿಂಗ್ ಮಾಡಬೇಕು ಎಂದು ಆಗ್ರಹಿಸಿದರು.
ನಗರದ ಓಣಿಯಲ್ಲಿರುವ ಅನೇಕ ರಸ್ತೆಗಳು ಡಾಂಬರ್ ಕಾಣದೆ ಬಹುತೇಕ ರಸ್ತೆಗಳು ಮಣ್ಣಿನ ರಸ್ತೆಗಳಾಗಿವೆ. ವಿಪರೀತ ಧೂಳು ಹರಡುತ್ತಿದೆ. ಧೂಳಿನಲ್ಲಿ ರಸ್ತೆಯಲ್ಲಿ ಸಂಚಾರ ಮಾಡುವುದು ಕಷ್ಟವಾಗಿದೆ. ತಕ್ಷಣ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ನಗರದ ಜನತೆಯನ್ನು ಕಾಪಾಡಬೇಕು ಎಂದು ಸಂಘಟನೆಯ ವಿ. ಪರಶುರಾಮ, ಬಿ.ಟಿ. ಮಂಜುನಾಥ, ಜಿಲ್ಲಾ ಕಾರ್ಯಾಧ್ಯಕ್ಷ ಜಾಕೀರ್ ಹುಸೇನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಜಿಯಾಬೇಗಂ, ಮಹಿಳಾ ಘಟಕದ ಅಧ್ಯಕ್ಷೆ ಗೀತಾಶಂಕರ್, ರಾಜಭಕ್ಷಿ, ಸೋಮಶೇಖರ್, ರಾಘವೇಂದ್ರ, ನಾಗರಾಜ್, ಜಿ. ವೆಂಕಟೇಶ್, ಜೆ. ರಾಮಾಂಜನಿ ಇತರರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

