ಪರಿಶ್ರಮ, ನಿರಂತರ ಅಧ್ಯಯನದಿಂದ ಉನ್ನತ ಸ್ಥಾನ: ತೆಲುಗು ಚಿತ್ರನಟ ಶ್ರೀಕಾಂತ್
ಬಳ್ಳಾರಿ: ವಿದ್ಯಾರ್ಥಿ ಜೀವನದಲ್ಲಿ ಸತತ ಪರಿಶ್ರಮ, ನಿರಂತರ ಅಧ್ಯಯನ ಇದ್ದಾಗ ಮಾತ್ರ ಉನ್ನತ ಸ್ಥಾನಮಾನ, ಗೌರವಗಳನ್ನು ಪಡೆಯಲು ಸಾಧ್ಯ ಎಂದು ತೆಲುಗು ಚಿತ್ರನಟ ಶ್ರೀಕಾಂತ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಶ್ರೀ ಚೈತನ್ಯ ಪಿಯು ಕಾಲೇಜಿನ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಶ್ರದ್ಧೆ ಮತ್ತು ಆಸಕ್ತಿ ವಹಿಸಿ ಅಧ್ಯಯನ ಮಾಡಿದಲ್ಲಿ ಜೀವನದಲ್ಲಿ ಯಶಸ್ಸು ಪಡೆಯಬಹುದು. ಅತ್ಯಮೂಲ್ಯ ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಿ ಎಂದರು.
ನಾಡೋಜ ಬೆಳಗಲ್ ವೀರಣ್ಣ ಮಾತನಾಡಿ, ಬಳ್ಳಾರಿ ಜಿಲ್ಲೆಯು ರಂಗಭೂಮಿಗೆ ಅಪಾರ ಕೊಡುಗೆ ನೀಡಿದೆ. ಇಂತಹ ನೆಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೀವು ಕಲೆ, ಸಾಹಿತ್ಯ, ರಂಗಭೂಮಿಯಲ್ಲಿ ಆಸಕ್ತಿ ಹೊಂದಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎನ್ಐಐಟಿಗೆ ಪ್ರವೇಶ ಪಡೆದ ಕಾಲೇಜಿನ ವಿದ್ಯಾರ್ಥಿಗಳಾದ ಅಜಯ್, ಪದ್ಮಿನಿ ಅವರನ್ನು ಚಿತ್ರನಟ ಶ್ರೀಕಾಂತ್ ಸನ್ಮಾನಿಸಿದರು. ಹಾಗೂ ರಾಷ್ಟ್ರೀಯ ಯುವಜನ ಸಮಾವೇಶ- 2014ರಲ್ಲಿ ಭರತನಾಟ್ಯಕ್ಕೆ ತೃತೀಯ ಸ್ಥಾನ ಪಡೆದ ಕಾಲೇಜಿನ ವಿದ್ಯಾರ್ಥಿನಿ ಪಿ. ರಂಜನಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತೆಲುಗಿನ ಖ್ಯಾತ ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್, ಪ್ರಾಚಾರ್ಯರಾದ ಅನಿತಾ, ಶ್ರೀರಾಮುಲು, ಬಿ. ಗೋಪಾಲ ಹಾಗೂ ಚಂದ್ರಶೇಖರ ಸೇರಿದಂತೆ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿನಿ ಮನೋಜ್ಞಾ, ದೀಪಿಕಾ ಪ್ರಾರ್ಥಿಸಿದರು. ದ್ರಾಕ್ಷಾಯಿಣಿ ನಿರೂಪಿಸಿದರು. ಪ್ರಾಚಾರ್ಯ ಬಿ. ಗೋಪಾಲ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

