ಹಮಾಲರಿಗೆ ನಿವೇಶನ, ಮನೆ ಮಂಜೂರಿಗೆ ಆಗ್ರಹ
ಸಂಡೂರು: ತೋರಣಗಲ್ಲ ಹಮಾಲಿಗಳಿಗೆ ನಿವೇಶನ ಮನೆ ಮಂಜೂರು ಮಾಡುವಂತೆ ಒತ್ತಾಯಿಸಿ ಸಂಡೂರು ತಾಲೂಕು ಹಮಾಲಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ತಾಲೂಕು ಸಮಿತಿ ಪದಾಧಿಕಾರಿಗಳು ತೋರಣಗಲ್ಲ ಗ್ರಾಪಂ ಪಿಡಿಒಗೆ ಮನವಿ ಸಲ್ಲಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ತಾತಪ್ಪ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ತೋರಣಗಲ್ಲ ಗ್ರಾಮದಲ್ಲಿ ಸುಮಾರು 25 ಜನ ಹಮಾಲಿಗಳು ಸಾರ್ವಜನಿಕ ಕೆಲಸಗಳನ್ನು ಮಾಡುತ್ತಿದ್ದು, ತೋರಣಗಲ್ಲು ಗ್ರಾಪಂ ಇದುವರೆಗೆ ಹಮಾಲಿ ಕಾರ್ಮಿಕರಿಗೆ ಯಾವುದೇ ರೀತಿಯ ಸೌಲಭ್ಯ ನೀಡದಿರುವುದು ಸಿಐಟಿಯು ಖಂಡಿಸುತ್ತದೆ ಎಂದರು.
ಸಾರ್ವಜನಿಕರ ಸೇವೆ ಮಾಡುತ್ತಿರುವ ಹಮಾಲರಿಗೆ ಗ್ರಾಪಂ ವತಿಯಿಂದ ನಿವೇಶನ ಹಾಗೂ ಜನತಾ ಮನೆ ಮಂಜೂರು ಮಾಡಬೇಕೆಂದು ತಾಲೂಕು ಹಮಾಲಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ತಾಲೂಕು ಸಮಿತಿ ಒತ್ತಾಯಿಸುತ್ತಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಇದಕ್ಕೆ ಉತ್ತರಿಸಿದ ಪಿಡಿಒ ಗಂಗಾಧರ್, ಇದೀಗ ಒಟ್ಟು 650 ಮನೆಗಳು ಮಂಜೂರಾಗಿವೆ. ಹಮಾಲರಿಗೆ ಮನೆ ಮಂಜೂರು ಮಾಡುವ ಕುರಿತಂತೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವೈ. ಸ್ವಾಮಿ, ಯು. ಕೋನಪ್ಪ, ದೊಡ್ಡಸ್ವಾಮಿ, ಅರಣ್ಯಯ್ಯ, ದೇವೇಂದ್ರಪ್ಪ, ನಾರಾಯಣಸ್ವಾಮಿ ಸೇರಿದಂತೆ ಇತರರು ಇದ್ದರು.
ತೋರಣಗಲ್ಲ ಗ್ರಾಮದಲ್ಲಿ ಸುಮಾರು 25 ಹಮಾಲಿಗಳು ಸಾರ್ವಜನಿಕ ಕೆಲಸಗಳನ್ನು ಮಾಡುತ್ತಿದ್ದು, ತೋರಣಗಲ್ಲು ಗ್ರಾಪಂ ಇದುವರೆಗೆ ಹಮಾಲಿಗಳಿಗೆ ಯಾವುದೇ ರೀತಿಯ ಸೌಲಭ್ಯ ನೀಡದಿರುವುದು ಖಂಡನೀಯ.
- ತಾತಪ್ಪ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

