ಕೊಟ್ಟೂರಲ್ಲಿ ಸದಾಶಿವ ಶ್ರೀಗಳ ಅಂತ್ಯಕ್ರಿಯೆ
ಕೊಟ್ಟೂರು: ಮಂಗಳವಾರ ರಾತ್ರಿ ಲಿಂಗೈಕ್ಯರಾದ ಕೊಟ್ಟೂರು ಶ್ರೀಗುರುಕೊಟ್ಟೂರೇಶ್ವರ ಸ್ವಾಮಿಯ ಕ್ರಿಯಾಮೂರ್ತಿಗಳಾಗಿದ್ದ ಶ್ರೀ ಸದಾಶಿವ ಮಹಾಸ್ವಾಮೀಜಿಯವರ ಅಂತ್ಯಕ್ರಿಯೆ ವೀರಶೈವ ಧರ್ಮಪರಂಪರೆ ಅನುಗುಣವಾಗಿ ಹತ್ತಾರು ಸ್ವಾಮೀಜಿಗಳು ಮತ್ತು ಭಕ್ತರ ನಮನಗಳೊಂದಿಗೆ ಬುಧವಾರ ಮಧ್ಯಾಹ್ನ ಇಲ್ಲಿನ ಮಹಲ್ಮಠದ ತೋಟದಲ್ಲಿ ನೆರವೇರಿತು.
ಸದಾಶಿವ ಮಹಾಸ್ವಾಮೀಜಿಯವರ ಪಾರ್ಥಿವ ಶರೀರ ದರ್ಶನ ಪಡೆಯಲು ಮಂಗಳವಾರ ರಾತ್ರಿಯಿಂದಲೇ ಭಕ್ತರು ತಂಡೋಪತಂಡಗಳಾಗಿ ಇಲ್ಲಿನ ಮಠಕ್ಕೆ ಆಗಮಿಸಿದರು. ವಿವಿಧ ಮುಖಂಡರಾದ ಎಂ.ಎಂ.ಜೆ. ಸತ್ಯಪ್ರಕಾಶ್, ಸ್ವರೂಪಾನಂದ, ಹರ್ಷವರ್ಧನ, ಕೊಟ್ಟೂರು ಪಪಂ ಸದಸ್ಯರಾದ ಅನಿಲ್ ಹೊಸಮನಿ, ಬಿ.ಎಸ್. ವೀರೇಶ್, ಡಿಶ್ ಮಂಜುನಾಥ, ಮುಖ್ಯಾಧಿಕಾರಿ ಪಂಪಾಪತಿ ನಾಯ್ಕ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಮಹೇಶ್, ಹಿರೇಮಠದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಸುತಗುಂಡಿ, ಮುಖಂಡ ಪಿ.ಎಚ್. ದೊಡ್ಡರಾಮಣ್ಣ, ಅನೇಕರು ಸ್ವಾಮೀಜಿಗಳ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ಮಧ್ಯಾಹ್ನ 12.30ರ ಸುಮಾರಿಗೆ ಸ್ವಾಮೀಜಿಯವರ ಮೃತದೇಹವನ್ನು ವಿವಿಧ ವಾದ್ಯಗಳೊಂದಿಗೆ ಕೊಂಡೊಯ್ದ ಭಕ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮಧ್ಯಾಹ್ನ 2.45ರ ಸುಮಾರಿನಲ್ಲಿ ಮಹಲ್ಮಠದ ಹಿರಿಯ ಶಂಕರ ಸ್ವಾಮೀಜಿಯವರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಕೂಡ್ಲಿಗಿಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ನಂದೀಪುರದ ಮಹೇಶ್ವರ ಸ್ವಾಮೀಜಿ, ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಚಾನುಕೋಟಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಭೂತಭುಂಜಗ ಮಠದ ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮೀಜಿ, ಹೂವಿನಹಡಗಲಿ ಗವಿಮಠದ ಅಭಿನವ ಸ್ವಾಮೀಜಿ ಸೇರಿದಂತೆ 25ಕ್ಕೂ ಅಧಿಕ ಸ್ವಾಮೀಜಿಗಳು ಹಾಜರಿದ್ದರು. ಕೊಟ್ಟೂರು ಮಠದ ಧರ್ಮಕರ್ತ ಎ.ಎಂ.ಬಿ. ಕೊಟ್ರಯ್ಯ, ಆಯಾಗಾರ ಬಳಗದ ಆರ್.ಎಂ. ಗುರುಬಸವಸ್ವಾಮಿ, ಡಿ. ಭುವನೇಶ್ವರ, ಸಕ್ರಿಗೌಡ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

