ಬಳ್ಳಾರಿ

ಕೈಗಾರಿಕೆಗಳ ಅಗತ್ಯತೆ ಹಿಂದೆಯೇ ಅರಿತಿದ್ದ ಸರ್ ಎಂ. ವಿಶ್ವೇಶ್ವರಯ್ಯ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 6
ಇಂದಿನ ಕೈಗಾರಿಕೆಗಳ ಅಗತ್ಯತೆಯನ್ನು ಎಂಜಿನಿಯರ್ ಸರ್. ಎಂ. ವಿಶ್ವೇಶ್ವರಯ್ಯನವರು ಅಂದೇ ಮನಗಂಡಿದ್ದರು ಎಂದು ಖ್ಯಾತ ಲೇಖಕಿ, ವೈದ್ಯೆ ಡಾ. ಜ್ಯೋತಿ ಅರವಿಂದ ಪಾಟೀಲ್ ಅಭಿಪ್ರಾಯಪಟ್ಟರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಸಿರಿಗೇರಿ ಅನ್ನಪೂರ್ಣಾ ಕ್ರಿಯೇಷನ್ಸ್ ಆಶ್ರಯದಲ್ಲಿ ನಗರದ ಮುಂಡ್ಲೂರು ರಾಮಪ್ಪ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರ 'ಬದುಕು ಮತ್ತು ಸಾಧನೆ' ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಿರುತೆರೆ ಮತ್ತು ಚಲನಚಿತ್ರ ನಟಿ ಅಶ್ವಿನಿ ಮಾತನಾಡಿ, ಸರ್. ಎಂ.ವಿ.ಯವರ ಸಾಕ್ಷ್ಯಚಿತ್ರ ಬಿಡುಗಡೆ ನನಗೆ ಅತೀವ ಸಂತಸ ತಂದಿದೆ. 28 ನಿಮಿಷಗಳ ಸಾಕ್ಷ್ಯಚಿತ್ರ ಸರ್. ಎಂ.ವಿ ಅವರ ಬದುಕು ಮತ್ತು ಸಾಧನೆಯ ಸಂಪೂರ್ಣ ಚಿತ್ರಣವನ್ನು ತೆರೆದಿಡುತ್ತದೆ ಎಂದರು.
ಸ್ನೇಹ ಸಂಪುಟ ಅಧ್ಯಕ್ಷ ಕಲ್ಲುಕಂಬ ಪಂಪಾಪತಿ ಮಾತನಾಡಿ, ಸಾಹಿತಿ ಕಲಾವಿದರಿಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕು ಎಂದರು. ಅನ್ನಪೂರ್ಣಾ ಕ್ರಿಯೇಷನ್ಸ್ ನಿರ್ಮಾಣ, ಸಿರಿಗೇರಿ ಯರಿಸ್ವಾಮಿ ನಿರ್ದೇಶನದ 'ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು. ಗೋವರ್ಧನ ರೆಡ್ಡಿ, ಕಸಾಪ ತಾಲೂಕಾಧ್ಯಕ್ಷೆ ಕೆ.ವಿ. ಜಯಲಕ್ಷ್ಮಿ ಮಾತನಾಡಿದರು. ಸಾಹಿತಿ ಗುರುರಾಜ ಆಚಾರ್, ಯುವ ಮುಖಂಡ ಬಿ.ಎಂ. ಪಾಟೀಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.