ಬಳ್ಳಾರಿ

ಅರ್ಥಶಾಸ್ತ್ರ ಪಠ್ಯಕ್ರಮ ಹಿಂಪಡೆಯಿರಿ: ಧರಣಿ

Published On :

ಸಂಡೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ ತೃತೀಯ ಸೆಮಿಸ್ಟರ್‌ಗೆ ನಿಗದಿಪಡಿಸಿದ ಅರ್ಥಶಾಸ್ತ್ರ ಪಠ್ಯಕ್ರಮವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶುಕ್ರವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. 2014-15ನೇ ಸಾಲಿನಲ್ಲಿ ಬಿಎ ತೃತೀಯ ಸೆಮಿಸ್ಟರ್‌ಗೆ ಂಛಝಿಛಟಜಡ್ಝ್ಛಿಡ ಛಟಿಜ ಖಡಿಛಡಿಡಡ್ಝ್ಛಿಡ ಊ್ಛ್ಟಟ್ಟಿಟಣ (ಅರ್ಥಶಾಸ್ತ್ರದ ಪರಿಮಾಣಾತ್ಮಕ ವಿಧಾನಗಳು) ಎಂಬ ಪಠ್ಯಕ್ರಮವನ್ನು ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದೆ. ಹೈದ್ರಾಬಾದ್ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಮಾನ್ಯ ಅರ್ಥಶಾಸ್ತ್ರವೇ ಕಠಿಣ ಪಠ್ಯವಾಗಿದ್ದು, ಹೆಚ್ಚು ವಿದ್ಯಾರ್ಥಿಗಳು ಅನುತ್ತಿರ್ಣರಾಗುತ್ತಿದ್ದಾರೆ. ಇಂಥ ಸಮಯದಲ್ಲಿ (ಅರ್ಥಶಾಸ್ತ್ರದ ಪರಿಮಾಣಾತ್ಮಕ ವಿಧಾನಗಳು) ಪಠ್ಯವನ್ನು ಸೇರ್ಪಡೆ ಮಾಡಿರುವುದು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಆದಕಾರಣ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಕುಲಪತಿಗಳು ಸದರಿ ಪಠ್ಯವನ್ನು ಹಿಂತೆಗೆದುಕೊಳ್ಳಬೇಕು. ಈ ಕೂಡಲೇ ತಾವುಗಳು ಪ್ರಸಕ್ತ ಸಾಲಿಗೆ ಈ ಹಿಂದೆ ಅಭ್ಯಾಸ ಮಾಡುತ್ತಿದ್ದ ಸಾಮಾನ್ಯ ಅರ್ಥಶಾಸ್ತ್ರ ಪಠ್ಯಕ್ರಮವನ್ನು ಮುಂದುವರೆಸಲು ಅನುವು ಮಾಡಿಕೊಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಕಾಲೇಜಿನ ಪ್ರಾಚಾರ್ಯ ನಾರಾಯಣಪ್ಪರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.