ಬಳ್ಳಾರಿ

ಬಿಎಂಎಂ ಇಸ್ಪಾತ್ ಕಂಪನಿ ಮುಚ್ಚಿಸಲು ಸಹಿ ಸಂಗ್ರಹ

Published On :

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಲಿ ಹೋಬಳಿಯ ಢಣಾಪುರ ಬಿಎಂಎಂ ಇಸ್ಪಾತ್ ಕಂಪನಿಯನ್ನು ಮುಚ್ಚುವಂತೆ ಆಗ್ರಹಿಸಿ ಕಾರ್ಖಾನೆಯಿಂದ ನೋವು ಅನುಭವಿಸಿದವರಿಂದ ಸಹಿ ಸಂಗ್ರಹ ಚಳುವಳಿ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರೈತ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಈ ಕಾರ್ಖಾನೆಯ ಅಕ್ರಮಗಳ ಗೂಡಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಎಂ ಕಾರ್ಖಾನೆ ಮುಚ್ಚಬೇಕೆಂದು ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಿಎಂಎಂ ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡು ತಮ್ಮ ಮಕ್ಕಳಿಗೆ ಕಾರ್ಖಾನೆಯಲ್ಲಿ ಉದ್ಯೋಗ ಪಡೆಯದೆ ವಂಚಿತರಾಗಿರುವ ಸಹಿ ಸಂಗ್ರಹ ಮಾಡಿ ಬಿಎಂಎಂ ಕಾರ್ಖಾನೆಯ ವಿರುದ್ಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಕರವೇಯ ಮರಿಯಮ್ಮನಹಳ್ಳಿ ಘಟಕದ ಗೌರವಾಧ್ಯಕ್ಷ ಭೀಮಪ್ಪ, ಘಟಕದ ಅಧ್ಯಕ್ಷ ಇ. ರಮೇಶ್ ಬ್ಯಾಲಕುಂದಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ನಾಗರಾಜ್, ಎಚ್. ರವಿ, ಜಿ. ರಮೇಶ್, ಎನ್. ಹರ್ಷಾ ಗರಗ, ಕಂಪ್ಲೆಪ್ಪ, ರಾಮು. ಪಿ. ಖಾಸಿಂಸಾಬ್, ರಾಮಚಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.