ಬಳ್ಳಾರಿ

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗಿ: ಲೋಕೇಶ

Published On :

ಸಿರುಗುಪ್ಪ: ವಿದ್ಯಾರ್ಥಿಗಳು ಕಾಲೇಜ್ ಜೀವನದಿಂದಲೇ ಬದುಕು ಕಟ್ಟಿಕೊಳ್ಳಬೇಕು. ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ ಎಂಬ ಕೀಳರಿಮೆ ಬಿಟ್ಟು ಪದವಿ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಿರುಗುಪ್ಪ ಠಾಣೆಯ ಸಿಪಿಐ ಎನ್. ಲೋಕೇಶ ತಿಳಿಸಿದರು.
ಪಟ್ಟಣದ ವಿ.ಕೆ.ಜೆ. ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಕನಕದಾಸ ಮಾತನಾಡಿ, ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಪಪೂ ಹಂತ ಅತ್ಯಂತ ಮುಖ್ಯವಾಗಿದೆ. ನಿರಂತರ ಅಭ್ಯಾಸದಿಂದ ಮಾತ್ರ ವಿದ್ಯಾರ್ಥಿಗಳು ಯಶಸ್ಸು  ಪಡೆಯಲು ಸಾಧ್ಯ ಎಂದರು.
ಕಾಲೇಜಿನ ಹಳೆಯ ವಿದ್ಯಾರ್ಥಿ ಡಾ. ಶೃತಿ ವಿಠಲ್ ರಾವ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಾದ ಶಿವಕುಮಾರ, ವೀಣಾ, ದೀಪರಾಮ್, ಯೋಗೇಶ್‌ಜಾಲಿ, ಶಾಂತಮ್ಮ, ಸರೋಜ, ಕಾಳೇಶ್ವರಿ, ವಿಜಯಲಕ್ಷ್ಮೀ, ಪಿ. ಮಂಜುನಾಥ, ಅಮೃತ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಹಳೇ ವಿದ್ಯಾರ್ಥಿಗಳಾದ ಮಲ್ಲೇಶಪ್ಪ ಶಿರಸ್ತೇದಾರ, ಡಾ. ಜಗನ್ನಾಥ್, ತಮ್ಮ ಅನಿಸಿಕೆಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.  ಶಿವಕುಮಾರ ಬಳಿಗಾರ್, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾ. ಮುತಾಲಿಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.