ಗೊರಟದಲ್ಲಿ ಹುತಾತ್ಮರ ಸ್ಮಾರಕ ನಿರ್ಮಾಣ
ಹೊಸಪೇಟೆ: ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಗೊರಟ ಎಂಬ ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ನಿರ್ಮಾಣ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಪುತ್ಥಳಿ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮುನಿರಾಜು ಗೌಡ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬಿಜೆಪಿ ಮಂಡಳ ಯುವ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸುವ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಹೈದ್ರಾಬಾದ್ ನಿಜಾಮರ ಕಾಲದ ಆಳ್ವಿಕೆಯಿಂದ ಸ್ವತಂತ್ರರಾಗಲು ಹೋರಾಡಿದ ಹೈದ್ರಾಬಾದ್ ಕರ್ನಾಟಕ ಭಾಗದ ಹುತಾತ್ಮರ ಸವಿನೆನಪಿಗಾಗಿ ಹಾಗೂ ಉಕ್ಕಿನ ಮನುಷ್ಯ ಸರದಾರ್ ವಲ್ಲಭ ಬಾಯಿ ಪಟೇಲ್ ಅವರ ಸ್ಮರಣಾರ್ಥ ಬೀದರ್ ಜಿಲ್ಲೆಯ ಗೊರಟ ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ನಿರ್ಮಾಣ ಹಾಗೂ ಉಕ್ಕಿನ ಮನುಷ್ಯ ಸರದಾರ್ ವಲ್ಲಭ ಬಾಯಿ ಪಟೇಲ್ ಅವರ ಪುತ್ಥಳಿ ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದರು.
ಹುತಾತ್ಮರ ಸವಿನೆನಪಿಗಾಗಿ ಆ ಗ್ರಾಮದಲ್ಲಿ ಸುಮಾರು 1 ಎಕರೆ ಜಾಗೆಯಲ್ಲಿ ಸ್ಮಾರಕ ಮತ್ತು ಸರ್ದಾರ್ ವಲ್ಲಭ ಬಾಯಿ ಪಟೇಲ್ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಬರುವ ಸೆಪ್ಟಂಬರ್ 17ರಂದು ಚಾಲನೆ ನೀಡಿ, 2015ರ ಸೆಪ್ಟಂಬರ್ 17ಕ್ಕೆ ಲೋಕಾರ್ಪಣೆಗೊಳಿಸುವುದಾಗಿ ವಿವರಿಸಿದರು.
ರಾಜ್ಯದ ಬಿಜೆಪಿ ಘಟಕದ ಯುವ ಮೋರ್ಚಾ ಕಾರ್ಯಕರ್ತರು ಪ್ರತಿ ಮತಗಟ್ಟೆ ವ್ಯಾಪ್ತಿಯಿಂದ 5 ಯುವಕರನ್ನು ಸಂಪರ್ಕಿಸಿ ಪ್ರತಿಯೊಬ್ಬರಿಂದ ರು. 10 ಹುತಾತ್ಮರ ಸ್ಮಾರಕ ನಿಧಿ ಸಂಗ್ರಹಿಸುವ ಮೂಲಕ ಸ್ಮಾರಕ ನಿರ್ಮಾಣಕ್ಕೆ ಕೈ ಜೋಡಿಸಲಾಗುತ್ತದೆ. ಪ್ರತಿ ಮತದಾನ ಕೇಂದ್ರದ ವ್ಯಾಪ್ತಿಯಲ್ಲಿ ರಾಜ್ಯಾದ್ಯಾಂತ ಹುತಾತ್ಮರ ಸ್ಮರಣೆಯಲ್ಲಿ ಸಸಿಗಳನ್ನು ನೆಡುವ ಮೂಲಕ ರಾಜ್ಯದಲ್ಲಿ ಗಿಡಗಳನ್ನು ಬೆಳೆಸಲಾಗುತ್ತದೆ. ಗೊರಟ ಗ್ರಾಮವನ್ನು ಬಿಜೆಪಿ ಯುವ ಘಟಕವು ದತ್ತು ಪಡೆದುಕೊಂಡು ಅಭಿವೃದ್ಧಿ ಪಡೆಸುವುದಾಗಿ ಅವರು ಹೇಳಿದರು.
ಬಿಜೆಪಿ ಘಟಕದ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ. ನೇಮಿರಾಜ್ ನಾಯ್ಕ್, ಯುವ ಮೋರ್ಚ್ದ ರಾಜ್ಯ ಕಾರ್ಯದರ್ಶಿ ರವೀಂದ್ರ ರೆಡ್ಡಿ, ನಗರಸಭಾ ಸದಸ್ಯ ಹಾಗೂ ಜಿಲ್ಲಾ ಯುವ ಘಟಕದ ಅಧ್ಯಕ್ಷ ಚಂದ್ರಕಾಂತ್ ಕಾಮತ್, ನಗರಸಭಾ ಸದಸ್ಯ ರೂಪೇಶ್ ಕುಮಾರ್, ಬಿಜೆಪಿ ಮುಖಂಡ ಅನಂತ ಪದ್ಮನಾಭ್, ದೇವಿಸಿಂಗ್ ಠಾಕೋರ್, ಸಂದೀಪ್ ಸಿಂಗ್, ಗುಜ್ಜಲ್ ಹನುಮೇಶ್, ಬದ್ರಿ, ಜೀವರತ್ನಂ, ಗೌಳಿ ಬಸವರಾಜ, ಶ್ರೀಕಾಂತ್, ವಿಜಯ ಕುಮಾರ್ ಹಿರೇಮಠ, ಸುಧಾಕರ್ ರೆಡ್ಡಿ, ಸುಧೀರ್ ಕುಮಾರ್, ರಾಜಶೇಖರ್, ರವಿಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

