ಬಳ್ಳಾರಿ

ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Published On :

ಬಳ್ಳಾರಿ:  ಸಮರ್ಪಕ ಕುಡಿವ ನೀರು ಸರಬರಾಜಿಗೆ ಆಗ್ರಹಿಸಿ, ಸ್ಥಳೀಯ ಹೌಸಿಂಗ್‌ಬೋರ್ಡ್ ಕಾಲೋನಿ, ಸಿದ್ಧಾರ್ಥ ನಗರ ಕಾಲೋನಿ ನಿವಾಸಿಗಳು ಸ್ಥಳೀಯ ಮೋಕಾ ರಸ್ತೆಯಲ್ಲಿ ಖಾಲಿ ಕೊಡಗಳನ್ನಿಟ್ಟು ಶನಿವಾರ ಪ್ರತಿಭಟನೆ ನಡೆಸಿದರು. 15 ದಿನಗಳಿಂದ ಬಡಾವಣೆಗಳಿಗೆ ಕುಡಿವ ನೀರು ಸರಬರಾಜಾಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ನಿವಾಸಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಪಾಲಿಕೆ ಆಡಳಿತದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ಕುಡಿವ ನೀರಿನ ಸಮಸ್ಯೆ ಕುರಿತು ಕಾಳಜಿ ವಹಿಸದ ಚುನಾಯಿತ ಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು. ಸ್ಥಳಕ್ಕೆ ಪಾಲಿಕೆ ಆಯುಕ್ತರೇ ಆಗಮಿಸಬೇಕು ಎಂದು ಪಟ್ಟು ಹಿಡಿದು, ಖಾಲಿ ಕೊಡಗಳನ್ನು ರಸ್ತೆಯಲ್ಲಿಟ್ಟು ಧರಣಿ ಕುಳಿತರು. ಸ್ಥಳೀಯ ನಿವಾಸಿಗಳಾದ ಅನಿಲ್‌ನಾಯ್ಡು, ರಾಘವೇಂದ್ರ ರೆಡ್ಡಿ, ಅಶೋಕ್ ಸೇರಿದಂತೆ ಹೌಸಿಂಗ್‌ಬೋರ್ಡ್ ಕಾಲೋನಿ, ಸಿದ್ಧಾರ್ಥ ನಗರದ ನೂರಾರು ನಿವಾಸಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.