ಬಳ್ಳಾರಿ

ವಿಶ್ವ ಜನಸಂಖ್ಯಾ ದಿನಾಚರಣೆ: ಮಕ್ಕಳಿಗೆ ಸ್ಪರ್ಧೆ

Published On :

ಹೂವಿನಹಡಗಲಿ: ತಾಲೂಕಿನ 63 ತಿಮ್ಲಾಪುರ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಮುಖ್ಯ ಶಿಕ್ಷಕ ಎಂ. ಸಿದ್ದೇಶ ಮಾತನಾಡಿ, ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಭಾರತ ಮುಂಚೂಣಿಯಲ್ಲಿದ್ದರೂ, ಏರುತ್ತಿರುವ ಜನಸಂಖ್ಯೆಯಿಂದಾಗಿ ದೇಶದ ಅಭಿವೃದ್ಧಿ ಕುಂಠಿತಗೊಂಡಿದೆ. ಜನಸಂಖ್ಯೆ ನಿಯಂತ್ರಣದಲ್ಲಿದ್ದರೆ ಮಾತ್ರ ಎಲ್ಲರಿಗೂ ಮೂಲ ಸೌಕರ್ಯ ದೊರೆಯಲು ಸಾಧ್ಯ ಎಂದರು. ಎಸ್‌ಡಿಎಂಸಿ ಸದಸ್ಯ ಹೆಗ್ಗಪ್ಪ ಕೋಟಿಹಾಳ, ಹಿರಿಯ ಶಿಕ್ಷಕ ಜಿ. ಮಲ್ಲಿಕಾರ್ಜುನಗೌಡ, ಬಿ. ಪ್ರಕಾಶ, ಎಂ. ಜಡೆಸಿದ್ದೇಶ್ವರ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ರಸಪ್ರಶ್ನೆ ಹಾಗೂ ಚರ್ಚಾಸ್ಪರ್ಧೆ ಏರ್ಪಡಿಸಲಾಗಿತ್ತು. ಶಿಕ್ಷಕ ಸಂತೋಷ ರಾಠೋಡ್ ನಿರ್ಣಾಯಕರಾಗಿದ್ದರು. ಶಿಕ್ಷಕ ಪಿ.ಎಂ. ಗಂಗಾಧರಯ್ಯ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.