ವಿ.ಕೆ.ಬಸಪ್ಪಗೆ ಕಾಂಗ್ರೆಸ್ ಟಿಕೆಟ್ ನೀಡಿ: ಒತ್ತಾಯ
ಬಳ್ಳಾರಿ: ಮುಂಬರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆಯಲ್ಲಿ ವಿ.ಕೆ.ಬಸಪ್ಪರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಗ್ರಾಮಾಂತರ ಕ್ಷೇತ್ರದ ಯುವಕರು ಪಕ್ಷದ ಮುಖಂಡರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಪಕ್ಷದ ಯುವ ಮುಖಂಡ ಮಂಜು, ಜಗದೀಶ್, ರಾಜಶೇಖರ್, ವಿ.ಕೆ. ಬಸಪ್ಪ 2009ರ ಲೋಕಸಭೆ, 2011ರ ಗ್ರಾಮಾಂತರ ಉಪಚುನಾವಣೆ, 2013ರ ಗ್ರಾಮಾಂತರ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳಲ್ಲಿ ಟಿಕೆಟ್ ವಂಚಿತರಾಗಿದ್ದಾರೆ. ಆದರೂ ಪಕ್ಷದ ಚಟುವಟಿಕೆಯಲ್ಲಿ, ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಕ್ಷೇತ್ರದ ಯುವಜನಾಂಗದ ಬೆಂಬಲವೂ ಇದೆ. ಈ ನಿಟ್ಟಿನಲ್ಲಿ ಮುಂಬರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಉಪಚುನಾವಣೆಯಲ್ಲಿ ವಿ.ಕೆ. ಬಸಪ್ಪನವರಿಗೆ ಟಿಕೆಟ್ ನೀಡಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ರೈಲು ಸೇವೆ ವಿಸ್ತರಣೆಗೆ ಬಳಕೆದಾರರ ಸಂಘ ಆಗ್ರಹ
ಹೊಸಪೇಟೆ: ಬಜೆಟ್ನಲ್ಲಿ ಘೋಷಿಸಿದಂತೆ ಅಹಮದಾಬಾದ್-ಚೆನ್ನೈ ನಡುವೆ ವಾರದಲ್ಲಿ ಎರಡು ಬಾರಿ ಚಲಿಸುವ ಎಕ್ಸ್ಪ್ರೆಸ್ ರೈಲನ್ನು ವಸಾಯ್ ರೋಡ್, ಸೊಲ್ಲಾಪುರ, ಹುಟಗಿ, ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗುಂತಕಲ್ ಮಾರ್ಗವಾಗಿ ಓಡಿಸಿದರೆ ಐತಿಹಾಸಿಕ ಹಂಪಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುತ್ತದೆ. ಹುಬ್ಬಳ್ಳಿ-ಚೆನ್ನೈ ಮಧ್ಯೆ ಗದಗ-ಕೊಪ್ಪಳ-ಗುಂತಕಲ್ ಮಾರ್ಗವಾಗಿ ನಿತ್ಯ ರೈಲಿನ ವ್ಯವಸ್ಥೆ ಮಾಡಬೇಕು. ಬಳ್ಳಾರಿ, ಗುಂತಕಲ್, ರೇಣುಗುಂಟ ಮಾರ್ಗವಾಗಿ ವಾರದಲ್ಲಿ ಮೂರು ಬಾರಿ ರೈಲು ಓಡಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಭೇಟಿಯಾದ ರಾಷ್ಟ್ರೀಯ ರೈಲ್ವೆ ಬಳಕೆದಾರರ ಪರಿಷತ್ ಸದಸ್ಯರಾದ ಬಾಬುಲಾಲ್ ಜೀ ಜೈನ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದರಾದ ಕೆ. ವಿರೂಪಾಕ್ಷಪ್ಪ, ಬಸವರಾಜ್ ಪಾಟೀಲ್ ಸೇಡಂ ಮತ್ತಿತರರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

