ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ಬೇಕಿದೆ
ಬಳ್ಳಾರಿ: ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ್ ಗುರಿಕಾರ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ವರ್ಗಾವಣೆ ಕಾಯ್ದೆಯಲ್ಲಿ ಬಹಳಷ್ಟು ಲೋಪದೋಷಗಳಿದ್ದು, ಈ ಲೋಪದೋಷಗಳನ್ನು ಸರಿಪಡಿಸಿ ಸಮಗ್ರ ತಿದ್ದುಪಡಿ ತರುವಂತೆ ಮನವಿ ಮಾಡಿದ್ದರೂ ವರ್ಗಾವಣೆ ಕಾಯ್ದೆ ತಿದ್ದುಪಡಿಯಾಗದೆ ಇರುವುದರಿಂದ ವರ್ಗಾವಣೆ ಬಯಸಿದ ಶಿಕ್ಷಕರಿಗೆ ಬಹಳಷ್ಟು ಸಮಸ್ಯೆಯಾಗಿದೆ ಎಂದು ತಿಳಿಸಿದರು.
ಒಂದು ಜ್ಯೇಷ್ಠತಾ ಘಟಕದಿಂದ ಇನ್ನೊಂದು ಜೇಷ್ಠತಾ ಘಟಕಕ್ಕೆ ವರ್ಗಾವಣೆ ಬಯಸುವಾಗ ಮೇ 1, 2005ಕ್ಕೆ 5 ವರ್ಷ ಆಗಿರಬೇಕೆಂಬ ನಿಯಮವಿದ್ದು, ಇದರಿಂದಾಗಿ ಬಹಳಷ್ಟು ಗೊಂದಲ ಸೃಷ್ಟಿಯಾಗಿದೆ. ಮೇ 1, 2005ಕ್ಕೆ 5 ವರ್ಷ ಎಂದರೆ ಮೇ 1, 2014ಕ್ಕೆ 9 ವರ್ಷ ಪೂರೈಸಿದವರು, ವರ್ಗಾವಣೆಗೆ ಅರ್ಹರಾಗುವುದಿಲ್ಲ, ಇದರಿಂದಾಗಿ ಶಿಕ್ಷಕರಿಗೆ ಸಮಸ್ಯೆ ಯಾಗುತ್ತದೆ, 2 ವರ್ಷ ಸೇವೆ ಸಲ್ಲಿಸಿದವರು ವರ್ಗಾವಣೆ ಬಯಸಿದಲ್ಲಿ ಅಂತಹವರಿಗೆ ಖಾಲಿ ಇರುವ ಹುದ್ದೆಗಳಿಗೆ ವರ್ಗಾವಣೆ ಹೊಂದಲು ಅವಕಾಶ ಕಲ್ಪಿಸಬೇಕಾಗಿದೆ, ಘಟಕದಿಂದ ಘಟಕಕ್ಕೆ ವರ್ಗಾವಣೆ ಶೇ. 1ರಷ್ಟು, ಶೇ.8ಕ್ಕೆ ಹೆಚ್ಚಿಸಬೇಕು ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ವರ್ಗಾವಣೆ ಮಾಡಬೇಕು, ಸರ್ವಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ ನೇಮಕವಾದ ಶಿಕ್ಷಕರಿಗೆ ಖಾಲಿ ಇರುವ ಹುದ್ದೆಗಳಿಗೆ ವರ್ಗಾವಣೆ ಹೊಂದಲು ಅವಕಾಶ ನೀಡಬೇಕೆಂದು ಆಗ್ರಹಿಸಿದರು.
ಪರಸ್ಪರ ವರ್ಗಾವಣೆಗೆ ಯಾವುದೇ ನಿರ್ಬಂಧವನ್ನು ಹಾಕಬಾರದು, ನಗರ ಪ್ರದೇಶದಲ್ಲಿ ಪರಸ್ಪರ ವರ್ಗಾವಣೆ ಹೊಂದಲು ಅವಕಾಶವಿಲ್ಲವೆಂದು ತಿಳಿಸಿದ್ದು, ಇದರಿಂದ ಬೆಂಗಳೂರು, ಹುಬ್ಬಳ್ಳಿ, ಧಾರವಾಡ ಇನ್ನಿತರ ಮಹಾನಗರಗಳಲ್ಲಿ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶಿಕ್ಷಕರಿಗೆ ತೊಂದರೆಯಾಗುತ್ತದೆ. ನಗರ ಪ್ರದೇಶದಲ್ಲಿಯೂ ಸಹ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ತೊಂದರೆಯಾಗುತ್ತದೆ. ನಗರ ಪ್ರದೇಶದಲ್ಲಿಯೂ ಸಹ ಪರಸ್ಪರ ವರ್ಗಾವಣೆಗೆ ಯಾವುದೇ ನಿರ್ಬಂಧ ವಿಧಿಸಬಾರದು, ನಗರದ ಪ್ರದೇಶದಲ್ಲಿ ಪರಸ್ಪರ ವರ್ಗಾವಣೆ ಹೊಂದಲು ಅವಕಾಶವಿಲ್ಲವೆಂದು ಹೇಳುವುದು ಸರಿಯಲ್ಲ, ಕಾರಣ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ತೊಂದರೆಯಾಗುತ್ತದೆ. ಪರಸ್ಪರ ವರ್ಗಾವಣೆಗಳಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ತೊಂದರೆ ಮತ್ತು ಇನ್ನಿತರ ನಷ್ಟಗಳು ಆಗುವುದಿಲ್ಲ, ಇದರಿಂದಾಗಿ ಪರಸ್ಪರ ವರ್ಗಾವಣೆಯ ಹೊಂದಲು ಅವಕಾಶ ನೀಡಬೇಕೆಂದು ತಿಳಿಸಿದರು.
ಸಂಘದ ವಿ.ಎಂ. ನಾರಾಯಣಸ್ವಾಮಿ, ಅರುಣಾಪ್ರತಾಪ್ ರೆಡ್ಡಿ, ಬಳ್ಳಾರಿ ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ಎಂ.ಟಿ. ಮಲ್ಲೇಶ್, ನಿಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

