ಅತ್ಯಾಚಾರ ಪ್ರಕರಣ: ಬಿಜೆಪಿ ಪ್ರತಿಭಟನೆ, ಪ್ರತಿಕೃತಿ ದಹನ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 21
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರ, ಗೃಹ ಇಲಾಖೆ ಪ್ರತಿಕೃತಿ ದಹಿಸಿ, ಗೃಹ ಸಚಿವರ ರಾಜಿನಾಮೆಗೆ ಆಗ್ರಹಿಸಿದರು.
ಗೃಹ ಇಲಾಖೆ ವೈಫಲ್ಯದಿಂದ ರಾಜ್ಯದಲ್ಲಿ ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಅತ್ಯಾಚಾರ ಪ್ರಕರಣಗಳ ವಿರುದ್ಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಇದಕ್ಕೆ ಗೃಹ ಸಚಿವರ ಆಡಳಿತದ ವೈಫಲ್ಯವೇ ಕಾರಣ. ರಾಜ್ಯದಲ್ಲಿನ ಅತ್ಯಾಚಾರ ಮುಂತಾದ ಅಪರಾಧ ಪ್ರಕರಣಗಳು ಜನರನ್ನು ಬೆಚ್ಚಿ ಬೀಳಿಸಿವೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಸಮಸ್ಯೆ ಇಲ್ಲವೆಂಬಂತೆ ಗೃಹ ಸಚಿವರ ಕಾರ್ಯ ವೈಖರಿಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಖಂಡನೀಯ. ಗೃಹ ಸಚಿವರು ತಕ್ಷಣ ರಾಜಿನಾಮೆ ನೀಡುವಂತೆ ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ನೀಡಿದರು.
ಎಸ್. ಗುರುಲಿಂಗನಗೌಡ, ಕೆ.ಎ ರಾಮಲಿಂಗಪ್ಪ, ಎಚ್. ಹನುಮಂತಪ್ಪ, ಡಾ. ಟಿ.ಆರ್. ಶ್ರೀನಿವಾಸ್, ಪಾರ್ವತಿ ಇಂದುಶೇಖರ್, ಕೆ.ಎಸ್. ದಿವಾಕರ, ಕೆ. ಬಸವರಾಜ್, ಜಗನ್, ಸುಮಾ ರೆಡ್ಡಿ, ಬಿ. ಸೋಮು, ಕೆ.ಎಂ. ಜಯಗೋಪಾಲ್, ಶ್ರೀನಿವಾಸ ಪಾಟೀಲ್, ಅನಿಲ್ ನಾಯ್ಡು, ರಾಮಚಂದ್ರಪ್ಪ, ಕುಂದಾಪುರ ನಾಗರಾಜ್, ವೇಮಣ್ಣ, ಓಬಳೇಶ್ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

