ಮನೆಗೆ ನುಗ್ಗಿ ಅತ್ಯಾಚಾರ: ಆರೋಪಿ ಬಂಧನ
ಹೊಸಪೇಟೆ: ಯುವತಿ ಮನೆಗೇ ಅಕ್ರಮ ಪ್ರವೇಶ ಮಾಡಿದ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಕಮಲಾಪುರದ ನಿವಾಸಿ ಲಂಬೋದರ (23) ಚಿನ್ನದ ಅಂಗಡಿ ಇಟ್ಟುಕೊಂಡಿದ್ದಾನೆ. ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿ ಹಾಗೂ ಆರೋಪಿಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಿ.ಎನ್. ಲಾವಣ್ಯಾ, ಸಿಪಿಐ ರಘುಕುಮಾರ್, ಪಿಎಸ್ಐ ಹನುಮಂತಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

