ಕಾರ್ಮಿಕರಿಗೆ ಖಾತ್ರಿ ಕೂಲಿ ಒದಗಿಸಿ
ಹಗರಿಬೊಮ್ಮನಹಳ್ಳಿ: ಉದ್ಯೋಗ ಖಾತ್ರಿಯಡಿ ಕೆಲಸ ಮಾಡಿರುವ ಕೂಲಿಯ ಹಣ ಶೀಘ್ರ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಜನವಾದಿ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಕೂಲಿಕಾರ್ಮಿಕರು ಸೋಮವಾರ ಮಧ್ಯಾಹ್ನ ಹಗರಿಬೊಮ್ಮನಹಳ್ಳಿ ತಾಪಂ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ತಾಪಂ ಇಒಗೆ ಮನವಿ ಸಲ್ಲಿಸಿದರು.
ಎರಡು ಸಂಘಟನೆಗಳ ಪ್ರತಿಭಟನಾಕಾರರು ಪಟ್ಟಣದಲ್ಲಿನ ಸಿಪಿಎಂ ಪಕ್ಷದ ಕಚೇರಿಯಿಂದ ಉದ್ಯೋಗ ಖಾತ್ರಿ ಸ್ಪಷ್ಟ ಜಾರಿಗೆ ಆಗ್ರಹಿಸುವ ಘೋಷಣೆಗಳನ್ನು ಕೂಗಿ ಬಸವೇಶ್ವರ ಬಜಾರ್ ಮೂಲಕ ತಾಪಂ ಕಚೇರಿ ಮೆರವಣಿಗೆ ನಡೆಸಿ ಬಳಿಕ ಪ್ರತಿಭಟಿಸಿದರು.
ಜನವಾದಿ ಸಂಘಟನೆ ಮುಖಂಡ ಬಿ. ಮಾಳಮ್ಮ ಮಾತನಾಡಿ, ಉದ್ಯೋಗ ಖಾತ್ರಿ ಅನುಷ್ಠಾನ ತಾಲೂಕಿನಲ್ಲಿ ಅಸಮರ್ಪಕವಾಗಿದೆ. ಬಡವರು, ಕೂಲಿಕಾರ್ಮಿಕರಿಗೆ ಖಾತ್ರಿ ಯೋಜನೆಯಡಿ ಅನುಕೂಲವಾಗುವ ಬದಲು ಅನಾನುಕೂಲವೇ ಹೆಚ್ಚು. ಗ್ರಾಪಂ ಪಿಡಿಒ, ಆಡಳಿತ ಮಂಡಳಿಗಳು ಕೂಲಿಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ. ತಾಲೂಕಿನಲ್ಲಿ ಖಾತ್ರಿ ಸಮರ್ಪಕ ಜಾರಿಗೆ ತರಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಪ್ರಾಂತ ರೈತ ಸಂಘದ ಕಾರ್ಯದರ್ಶಿ ಕೊಟಗಿ ಮಲ್ಲಿಕಾರ್ಜುನ ಮಾತನಾಡಿ, ತಾಲೂಕಿನಲ್ಲಿ ಯಂತ್ರಗಳ ಸದ್ದು ಜೋರಾಗಿದೆ. ಕೂಲಿಕಾರ್ಮಿಕರಿಗೆ ಕೆಲಸ ನೀಡದೆ ವಂಚಿಸಲಾಗುತ್ತಿದೆ ಎಂದು ದೂರಿದರು. ರಂಗಪ್ಪ ದಾಸರ್, ಎಸ್. ಜಗನ್ನಾಥ ಧರಣಿಯಲ್ಲಿ ಭಾಗವಹಿಸಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

