ಪ್ರವಾಸೋದ್ಯಮ ಇಲಾಖೆ ಮೇಲೆ ಲೋಕಾಯುಕ್ತ ದಾಳಿ
ಹೊಸಪೇಟೆ: ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ, ಎಸ್ಟಿ ನಿರುದ್ಯೋಗಿ ಯುವಕರಿಗೆ ನೀಡುವ ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ, ಹೊಸಪೇಟೆ ಲೋಕಾಯುಕ್ತರು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಜು ಸಹಿತ ಮೂವರು ಸಿಬ್ಬಂದಿ ಮನೆ ಮೇಲೆ ಗುರುವಾರ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
2013-14ನೇ ಸಾಲಿನಲ್ಲಿ 269 ಎಸ್ಸಿ, ಎಸ್ಟಿ ನಿರುದ್ಯೋಗಿ ಯುವಕರಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಕೆಲವರು ಲೋಕಾಯುಕ್ತರಿಗೆ ದೂರು ನೀಡಿದರು. ಲೋಕಾಯುಕ್ತ ಡಿವೈಎಸ್ಪಿ ಎನ್.ಆರ್. ಮಹಾಂತರೆಡ್ಡಿ ನೇತೃತ್ವದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಜು ಅವರ ಮನೆ ಮೇಲೆ ಹಾಗೂ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಆರ್. ವಿಠಲ ಗೌಡ ಅವರ ಹಂಪಿ ನಿವಾಸದ ಮೇಲೆ, ನಗರದ ಅನಂತಶಯನ ಗುಡಿಯಲ್ಲಿರುವ ಇಲಾಖೆ ಕಾರಿನ ಚಾಲಕ ಚನ್ನಪ್ಪ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಹಂಪಿಯ ಕಮಲ್ ಮಹಲ್ ಸಮೀಪದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಕಚೇರಿ ಮೇಲೂ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಜು ನಗರದ ಗೌಳೇರ್ ಹಟ್ಟಿಯಲ್ಲಿರುವ ಬಾಡಿಗೆ ಮನೆಗೆ ಲೋಕಾಯುಕ್ತರು ದಾಳಿ ನಡೆಸಿ, ದಾಖಲೆ ಪತ್ರಗಳನ್ನು, ಹಂಪಿಯ ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿರುವ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಂಪಿಯಲ್ಲಿರುವ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಆರ್. ವಿಠಲ ಗೌಡ ಅವರ ಮನೆಯಲ್ಲಿ ಕೆಲ ಮಹತ್ವದ ದಾಖಲೆಗಳು ಸಿಕ್ಕಿವೆ. ಇಲಾಖೆ ಕಾರಿನ ಚಾಲಕ ಚನ್ನಪ್ಪ ಅವರ ಮನೆಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಬಸಪ್ಪ ಬುರ್ಲಿ, ಮಹಾಂತೇಶ್ ಹೊಸಪೇಟಿ, ಬಳ್ಳಾರಿಯ ಜಿ.ಎನ್. ಹೆಬ್ಬಾಳ್ ದಾಳಿಯಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

