ವಸತಿ ರಹಿತರಿಗೆ ನಿವೇಶನ: ಪ್ರಸ್ತಾವನೆ ಸಲ್ಲಿಸಲು ಸೂಚನೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜೂ. 5
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರಿಗೆ ನಿವೇಶನ ನೀಡಲು ಪ್ರಸ್ತಾವನೆಗಳಿದ್ದಲ್ಲಿ ಕೂಡಲೇ ತಾಲೂಕು ಪಂಚಾಯಿತಿಗೆ ಸಲ್ಲಿಸಬೇಕು ಎಂದು ಎಲ್ಲ ಪಿಡಿಒಗಳಿಗೆ ಬಳ್ಳಾರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೇಣಿ ಬಸಪ್ಪ ಸೂಚಿಸಿದರು.
ಇಲ್ಲಿನ ತಾಲೂಕು ಪಂಚಾಯಿತಿಯಲ್ಲಿ ಅಧ್ಯಕ್ಷ ವಿ. ಗಾದಿಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜರುಗಿದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
ವಸತಿ ಯೋಜನೆಯಡಿ ಸ್ಥಳ ಹಂಚಿಕೆಯಾದ ಗ್ರಾಮ ಪಂಚಾಯಿತಿಗಳು ಕೂಡಲೇ ಗ್ರಾಮಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಬೇಕೆಂದು ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ನರೇಗಾ ಯೋಜನೆಯಡಿ ನಿಗದಿತ ಗುರಿಯನ್ನು ಸಾಧಿಸಲು ಬೇಡಿಕೆ ಸಲ್ಲಿಸಿದ ಕೂಲಿ ಕಾರ್ಮಿಕರಿಗೆ ನಿಗದಿತ ಸಮಯದಲ್ಲಿ ಉದ್ಯೋಗ ಒದಗಿಸಲು ಪಿಡಿಒ ಹಾಗೂ ಅನುಷ್ಠಾನ ಇಲಾಖೆಗಳಿಗೆ ಸೂಚಿಸಿದರು.
ಅಧ್ಯಕ್ಷ ಗಾದಿಲಿಂಗಪ್ಪ ಮಾತನಾಡಿ, ತಾಲೂಕಿನ ಚರಕುಂಟೆ ಹಾಗೂ ಇಬ್ರಾಹಿಂಪುರದಲ್ಲಿ ಸ್ಮಶಾನ ಭೂಮಿಗಾಗಿ 20 ಗುಂಟೆ ಪ್ರದೇಶವನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಬೇಕೆಂದು ತಹಸೀಲ್ದಾರ್ಗೆತಿಳಿಸಿದರು.
ತಹಸೀಲ್ದಾರ್ ನಾಗರಾಜ್ ಪಾಟೀಲ್ ಮಾತನಾಡಿ, ಜೂನ್ 7ರಿಂದ ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಚೆನ್ನಪ್ಪ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮಾಹಿತಿ, ಗ್ರಾಮ ಪಂಚಾಯಿತಿ ಸಭೆ ಹಾಗೂ ಕರ ವಸೂಲಾತಿ ಮಾಹಿತಿಯನ್ನು ಕಡ್ಡಾಯವಾಗಿ ಪಂಚತಂತ್ರದಲ್ಲಿ ಅಳವಡಿಸಬೇಕೆಂದರು.
ತಾಲೂಕು ಮಟ್ಟದ 10 ಇಲಾಖೆಗಳು ಸಭೆಗೆ ಪ್ರಗತಿ ವರದಿ ಸಲ್ಲಿಸಿರುವುದಿಲ್ಲ. ಎಲ್ಲ ಇಲಾಖೆಗಳು ಕೆಡಿಪಿ ಸಭೆಗೆ ಪೂರ್ಣವಾದ ಮಾಹಿತಿಯನ್ನು ಸಲ್ಲಿಸಬೇಕು. ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಬೇಕೆಂದು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಮರೆಮ್ಮ, ತಾಲೂಕು ಅಧಿಕಾರಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

