ಬಳ್ಳಾರಿ

ಬಾಲಕಾರ್ಮಿಕರ ಆದಾಯ ಭವಿಷ್ಯಕ್ಕೆ ಮಾರಕ: ರಮೇಶರಾವ್

Published On :

ಧಾರವಾಡ: ಬಾಲಕಾರ್ಮಿಕರ ಆದಾಯ ಅವರ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಂ. ರಮೇಶರಾವ್ ಹೇಳಿದರು. ತೇಜಸ್ವಿನಿ ನಗರದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾದಿಗಳ ಸಂಘ, ರಾಷ್ಟ್ರೀಯ ಬಾಲಕಾರ್ಮಿಕರ ಯೋಜನಾ ಸಂಘ, ವಿವಿಧ ಇಲಾಖೆಗಳು ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಬಾಲಾವಸ್ಥೆಯಲ್ಲಿರುವ 6 ರಿಂದ 14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಭವಿಷ್ಯದಲ್ಲಿ ಪಾಶ್ಚಾತಾಪ ಪಡುತ್ತಾರೆ. ಜ್ಞಾನಾಭಿವೃದ್ಧಿಯಾಗದೆ ವಿವಿಧ ಹಂತದ ತೊಂದರೆಗೆ ಒಳಪಡುತ್ತಾರೆ. ಇದನ್ನರಿತ ಸರ್ಕಾರ ಕಠಿಣ ಕಾನೂನು ಜಾರಿ ಮಾಡಿದೆ. ಎಲ್ಲ ಮಕ್ಕಳು ಅಕ್ಷರಸ್ಥರಾಗಬೇಕು ಎಂದರು. ಜಿಲ್ಲಾಧಿಕಾರಿ ಪಿ. ರಾಜೇಂದ್ರ ಚೊಳನ್ ಅಧ್ಯಕ್ಷತೆ ವಹಿಸಿ, ಮಕ್ಕಳನ್ನು ಕೈಗಾರಿಕೆ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಬಳಸಿಕೊಳ್ಳುವುದು ಅಪರಾಧ. ಇಂತಹ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ದಂಡ ಮತ್ತು ಶಿಕ್ಷೆ ಎರಡೂ ಇದೆ. ರಾಜ್ಯದಲ್ಲಿ 53 ಸಾವಿರ ಬಾಲಕಾರ್ಮಿಕರು ಇರುವುದು ಸಮೀಕ್ಷೆಯಿಂದ ಕಂಡು ಬಂದಿದ್ದು, ಧಾರವಾಡ ಜಿಲ್ಲೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಗುರುತಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು. ಜಿಲಾಧಿಕಾರಿ ಪಿ. ರಾಜೇಂದ್ರ ಚೋಳನ್ ಶಾಲಾ ಮಕ್ಕಳ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎ.ವಿ. ಶ್ರೀನಾಥ, ವಕೀಲರ ಸಂಘದ ಅಧ್ಯಕ್ಷ ವಿ.ಡಿ. ಕಾಮರೆಡ್ಡಿ, ಸಹಾಯಕ ಕಾರ್ಮಿಕ ಆಯುಕ್ತ ಎಸ್. ರೇವಣ್ಣ, ನ್ಯಾಯವಾದಿ ಬಿ.ಎಸ್. ಸಂಗಟಿ, ಪ್ರಫುಲ್ಲಾ ನಾಯ್ಕ, ಟಿ.ಎಸ್. ಅಪ್ಪಣ್ಣವರ, ಎಸ್.ಕೆ. ಕಾತ್ರಾಳೆ, ಎ.ಎನ್. ಪಾಟೀಲ ಆರ್.ಬಿ. ಪತ್ತಾರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.