ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ: ಮಕ್ಕಳಿಂದ ಜಾಗೃತಿ ಜಾಥಾ
ಸಿರುಗುಪ್ಪ: ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆಯ ಅಂಗವಾಗಿ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಾಲಾ ಮಕ್ಕಳ ಜಾಗೃತಿ ಜಾಥಾಕ್ಕೆ ತಾಲೂಕು ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ ಜಾನಕಿರಾಮ್ ಮಿಸ್ಕಿನ್ ಚಾಲನೆ ನೀಡಿದರು. ತಹಸೀಲ್ದಾರ್ ವೆಂಕನಗೌಡ ಆರ್. ಪಾಟೀಲ ಶಾಲಾ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಯಾವುದೇ ಕಾರಣಕ್ಕೂ ಶಿಕ್ಷಣ ಬಿಡುವುದಿಲ್ಲ. ಬಾಲ ಕಾರ್ಮಿಕರನ್ನು ಗುರುತಿಸಿ ಆವರನ್ನು ಶಾಲೆಗೆ ಸೇರುವಂತೆ ತಿಳಿಸುತ್ತೇವೆ. ಪಾಲಕರಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಲು ಒತ್ತಾಯಿಸುತ್ತೇವೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು. ಪಟ್ಟಣದ 400ಕ್ಕೂ ಹೆಚ್ಚು ಶಾಲಾ ಮಕ್ಕಳು ತಹಸೀಲ್ದಾರ್ ಕಚೇರಿಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಜಾಗೃತಿ ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗೂತ್ತಾ ಜಾಥಾ ನಡೆಸಿದರು. ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ, ದೊಡ್ಡನಗೌಡರ್, ಪುರಸಭೆ ಮುಖ್ಯಾಧಿಕಾರಿ ಹಾಜಿಬಾಬ, ತಾಪಂ ಕಾರ್ಯದರ್ಶಿ ರಾಧಕೃಷ್ಣ ರೆಡ್ಡಿ, ಉಪ ತಹಸೀಲ್ದಾರ್ ಮಲ್ಲೇಶಪ್ಪ, ತಾಲೂಕು ಕಾರ್ಮಿಕ ನಿರೀಕ್ಷಕ ಡಿ. ಸೀತಾರಾಮಪ್ಪ ಇನ್ನಿತರರು ಇದ್ದರು. ಪಟ್ಟಣದ ಹಲವಾರು ಶಾಲೆಯ ಶಿಕ್ಷಕರು, ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

